ಚಿಕ್ಕಬಳ್ಳಾಪುರ: ‘ವ್ಯವಸಾಯ ಸೇವಾ ಸಹಕಾರ ಸಂಘಗಳ ಕಾರ್ಯದರ್ಶಿಗಳ ಅಸಡ್ಡೆಯಿಂದಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಸ್ತ್ರೀಶಕ್ತಿ ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ನಿಂದ ಶೂನ್ಯ ಬಡ್ಡಿ ದರದ ಸಾಲ ಸರಿಯಾಗಿ ವಿತರಣೆಯಾಗುತ್ತಿಲ್ಲ. ಈ ವಿಚಾರದಲ್ಲಿ ಕಾರ್ಯದರ್ಶಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು’ ಎಂದು ಡಿಸಿಸಿ ಬ್ಯಾಂಕ್ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಚಿಕ್ಕಬಳ್ಳಾಪುರ ತಾಲ್ಲೂಕಿನ ವ್ಯವಸಾಯ ಸೇವಾ ಸಹಕಾರ ಸಂಘಗಳ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕೋಲಾರ–ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳ ಪೈಕಿ ಈ ತಾಲ್ಲೂಕಿನಲ್ಲಿ ಮಾತ್ರ ಶೂನ್ಯ ಬಡ್ಡಿ ದರದ ಸಾಲ ವಿತರಣೆ ಪ್ರಗತಿ ತುಂಬಾ ಕೆಳಮಟ್ಟದಲ್ಲಿದೆ. ಬ್ಯಾಂಕ್ ಎಷ್ಟು ಬೇಕಾದರೂ ಸಾಲ ಕೊಡಲು ಸಿದ್ಧವಿದೆ. ಆದರೆ ಕಾರ್ಯದರ್ಶಿಗಳು ಬೆಳೆಸಾಲಕ್ಕೆ ನೀಡಿದ ಆದ್ಯತೆ ಈ ಸಾಲಕ್ಕೆ ನೀಡದ ಕಾರಣ ಮಹಿಳೆಯರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ತಿಳಿಸಿದರು.

‘ಕಾರ್ಯದರ್ಶಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ಅವರ ನಾಮಕಾವಾಸ್ತೆ ಕೆಲಸದಿಂದಾಗಿ ನಮಗೆ ಕೆಟ್ಟ ಹೆಸರು ಬರುತ್ತಿದೆ. ಈ ತಾಲ್ಲೂಕಿಗೆ ಸಾಲ ವಿತರಿಸುವಲ್ಲಿ ನಾವು ತಾರತಮ್ಯ ಮಾಡುತ್ತಿದ್ದೇವೆ ಎಂದು ಶಾಸಕರು ಆರೋಪಿಸುತ್ತಿದ್ದಾರೆ. ಆದ್ದರಿಂದ ವರ್ಷಕ್ಕೊಮ್ಮೆ ಸಂಘದ ಕಚೇರಿ ಬಾಗಿಲು ತೆಗೆಯುವವರು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗಿ’ ಎಂದು ಖಡಕ್ ಎಚ್ಚರಿಕೆ ನೀಡಿದರು.

‘ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಸುಮಾರು 1 ಲಕ್ಷ ಮಹಿಳೆಯರಿಗೆ ಸಾಲ ವಿತರಿಸಬಹುದಾಗಿದೆ. ಆದರೆ ಕಾರ್ಯದರ್ಶಿಗಳ ನಿರ್ಲಕ್ಷ್ಯದಿಂದಾಗಿ ಈವರೆಗೆ ಶೇ10 ರಷ್ಟು ಮಹಿಳೆಯರಿಗೂ ಸಾಲ ದೊರೆತಿಲ್ಲ. ಇದರಿಂದಾಗಿ ಅಧ್ಯಕ್ಷರು ನಮಗೆ ಮೋಸ ಮಾಡುತ್ತಿದ್ದಾರೆ ಎಂಬ ಭಾವನೆ ಈ ತಾಲ್ಲೂಕಿನವರಲ್ಲಿ ಬರುತ್ತಿದೆ. ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯದರ್ಶಿಗಳು ನಾಳೆಯಿಂದಲೇ ಚುರುಕಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಬ್ಯಾಂಕಿನ ಸ್ಥಳೀಯ ನಿರ್ದೇಶಕರು ಸಹ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚೆಚ್ಚು ಸಾಲ ವಿತರಿಸುವ ದಿಸೆಯಲ್ಲಿ ಕಾರ್ಯದರ್ಶಿಗಳಿಂದ ಕೆಲಸ ತೆಗೆಯಬೇಕು. ಕಾರ್ಯದರ್ಶಿಗಳು ಹಳ್ಳಿ ಹಳ್ಳಿಗೆ ಹೋಗಿ ಪ್ರಾಮಾಣಿಕ ಗುಂಪುಗಳನ್ನು ಗುರುತಿಸಿ ಸಾಲ ಒದಗಿಸಲು ಕ್ರಮಕೈಗೊಳ್ಳಬೇಕು. ಸಂಘವೊಂದು ₨10 ಕೋಟಿ ಸಾಲ ಕೊಡಿಸಿದರೆ ಅದರಿಂದ ₨20 ಲಕ್ಷ ಆದಾಯ ಬರುತ್ತದೆ’ ಎಂದು ತಿಳಿಸಿದರು.

‘ಪ್ರತಿಯೊಬ್ಬ ಕಾರ್ಯದರ್ಶಿಗಳು ಇನ್ನು ಮುಂದಾದರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮಹಿಳಾ ಸಂಘಗಳ ರಚನೆಗೆ ಮುಂದಾಗಬೇಕು. ಈ ಕೆಲಸದಲ್ಲಿ ಯಾವುದೇ ಸಬೂಬು ಹೇಳುವಂತಿಲ್ಲ. ಮಹಿಳೆಯರಿಗೆ ಶೂನ್ಯ ಬಡ್ಡಿ ದರದ ಸಾಲ ವಿತರಿಸುವಲ್ಲಿ ನಿರ್ಲಕ್ಷ್ಯ ತೋರುವ ಸಂಘಗಳಿಗೆ ಬೆಳೆ ಸಾಲ ನೀಡುವುದಿಲ್ಲ’ ಎಂದರು.

ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಚ್.ಎಸ್.ಮೋಹನ್ ರೆಡ್ಡಿ, ಕೆ.ಎಸ್.ದ್ಯಾವಪ್ಪ, ಕಸಬಾ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಚೆನ್ನಕೃಷ್ಣಪ್ಪ, ಅಡಗಲ್ ಸಂಘದ ಅಧ್ಯಕ್ಷ ಪಿ.ಕೆಂಪಣ್ಣ ಮತ್ತು ಮೈಲಪ್ಪನಹಳ್ಳಿ ಸಂಘದ ಅಧ್ಯಕ್ಷ ಜಗದೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.