ಚಿಕ್ಕಬಳ್ಳಾಪುರ: ‘ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಸಹಕಾರ ಇಲಾಖೆಯಿಂದ ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ₹10 ಸಾವಿರದಿಂದ ₹50 ಸಾವಿರ ದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸಲು ನಿರ್ಧರಿಸಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ಸರ್ಕಾರ ₹3,000 ಪ್ರೋತ್ಸಾಹ ಧನ ನೀಡುತ್ತಿದೆ. ಮುಂಬರುವ ದಿನಗಳಲ್ಲಿ ಸಹಕಾರ ಇಲಾಖೆಯಿಂದ ಶೂನ್ಯ ಬಡ್ಡಿ ದರದ ಸಾಲ ವಿತರಿಸಲಾಗುತ್ತದೆ. ಆ ಯೋಜನೆ ಯಾವ ರೀತಿ ಅನುಷ್ಠಾನಗೊಳಿಸಬೇಕು ಎಂಬುದು ಶೀಘ್ರದಲ್ಲಿಯೇ ತೀರ್ಮಾನಿಸಲಾಗುತ್ತದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಈ ಬಾರಿ ಡಿಸಿಸಿ ಬ್ಯಾಂಕ್‌ಗಳ ಮೂಲಕ ₹14,500 ಕೋಟಿ ಸಾಲ ವಿತರಿಸಲು ಗುರಿ ಹೊಂದಲಾಗಿದೆ. ಹಳೆಯ ಸಾಲದ ಜತೆಗೆ ಹೊಸ ಸಾಲ ವಿತರಿಸಲು ಚಿಂತನೆ ನಡೆಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನಿಗದಿತ ಶೇಕಡಾವರು ಸಾಲವನ್ನು ಕಡ್ಡಾಯವಾಗಿ ವಿತರಿಸಲು ಸೂಚಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡುವಲ್ಲಿ ಸರ್ಕಾರ ಯಾವುದೇ ರೀತಿಯ ರಾಜಕೀಯ ಮಾಡುತ್ತಿಲ್ಲ. ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಅವರು ಕಾರ್ಯಕ್ರಮ ನಡೆಸಬಹುದು'ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.