ಗೌರಿಬಿದನೂರು: ಪಟ್ಟಣದಲ್ಲಿ ಭಾನುವಾರ ಗ್ರಾಹಕರ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ರಾಘವೇಂದ್ರ ಟ್ರಸ್ಟ್ ಫಾರ್ ಎಜುಕೇಷನ್ ಸಂಸ್ಥೆ ಸದಸ್ಯರು ಸಂತೆಯಲ್ಲಿ ಗ್ರಾಹಕರ ಹಕ್ಕುಗಳ ಮತ್ತು ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸಿದರು.

ರಾಘವೇಂದ್ರ ಟ್ರಸ್ಟ್ನ ಕಾರ್ಯದರ್ಶಿ ಬಿ.ವಿ ಅಶ್ವತ್ಥನಾರಾಯಣಶೆಟ್ಟಿ ಮಾತನಾಡಿ, ಖರೀದಿಸುವ ಮುನ್ನ ಗ್ರಾಹಕರು ವಸ್ತುವಿನ ದಿನಾಂಕ, ಗುಣಮಟ್ಟ ಪರಿಶೀಲಿಸಬೇಕು. ಇದಲ್ಲದೇ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಗ್ರಾಹಕರ ವೇದಿಕೆಗಳಲ್ಲಿ ದೂರು ಸಲ್ಲಿಸಿ ಪರಿಹಾರ ಪಡೆಯಬಹುದು ಎಂದು ತಿಳಿಸಿದರು.

ತೂಕ ಮತ್ತು ಅಳತೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ, ನಕಲಿ ವಸ್ತುಗಳ ಬಗ್ಗೆ ಎಚ್ಚರ ವಹಿಸಿ, ಪ್ರತಿ ವರ್ಷ ಇಲಾಖೆ ವತಿಯಿಂದ ಪರಿಶೀಲಿಸಲಾಗಿದೆಯೇ ಎಂಬುದನ್ನು ಗಮನಿಸಬೇಕು. ಸರಕುಗಳ ಯೋಗ್ಯತೆ, ಪ್ರಮಾಣ, ಶುದ್ಧತೆ, ಧಾರಣೆ ಬಗ್ಗೆ ಮಾಹಿತಿ ಪಡೆಯುವುದು ಅಗತ್ಯ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಬಾಲಕೃಷ್ಣ, ಕೆ.ನರಸಿಂಹರೆಡ್ಡಿ, ಬಾಲಕೃಷ್ಣ, ಪ್ರದೀಪ್ಕುಮಾರ್, ಲಕ್ಷ್ಮೀನರಸಪ್ಪ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.