ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ :ಜೂನ್ 10ಕ್ಕೆ ಛಲವಾದಿ ಸಮಾವೇಶ

Last Updated 4 ಜೂನ್ 2011, 9:35 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಜ್ಯಮಟ್ಟದ ಛಲವಾದಿ ಜನಾಂಗದ ಎರಡನೇ ಸಮಾವೇಶ ಮತ್ತು ಛಲವಾದಿ ಭವನದ ಅಡಿಗಲ್ಲು ಸಮಾರಂಭ ಇದೇ ತಿಂಗಳ 10ರಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಛಲವಾದಿ ಭವನದ ಶಂಕು ಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾರಂಭವನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ ಎಂದು ಛಲವಾದಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಡಾ. ಸುಭಾಷ್ ನಾಟಿಕರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕೆಪಿಸಿಸಿ ಅಧ್ಯಕ್ಷ  . ಜಿ.ಪರಮೇಶ್ವರ ಗೌರವ ಸಮರ್ಪಣೆ ಮಾಡಲಿದ್ದಾರೆ. `ದಲಿತ ಪ್ರಭೆ~ ಎಂಬ ಕೃತಿಯನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಬಿಡುಗಡೆ ಮಾಡಲಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ಮೋಟಮ್ಮ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆ ಬಳಿ ಸುಮಾರು ರೂ.11 ಕೋಟಿ ವೆಚ್ಚದಲ್ಲಿ ಛಲವಾದಿ ಭವನ ನಿರ್ಮಿಸಲಾಗುತ್ತಿದೆ. ನಿರ್ಮಾಣ ಕಾರ್ಯಕ್ಕೆ ಸರ್ಕಾರದ ನೆರವನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು.

ಛಲವಾದಿ ಜನಾಂಗದ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT