ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಗೆಲುವು; ಬಿಜೆಪಿ ವಿಜಯೋತ್ಸವ

Last Updated 9 ಡಿಸೆಂಬರ್ 2013, 10:34 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಫಲಿತಾಂಶ ಬಂದಿದ್ದು, ಲೋಕ­ಸಭಾ ಚುನಾವಣೆಯಲ್ಲೂ ಬಿಜೆಪಿ ಬಹು­ಮತ ಗಳಿಸಲಿದೆ ಎಂದು ಬಿಜೆಪಿ ಮುಖಂಡ ಅಗಲಗುರ್ಕಿ ಚಂದ್ರಶೇಖರ್‌ ತಿಳಿಸಿದರು.

ಫಲಿತಾಂಶ ಘೋಷಣೆಯಾಗು­ತ್ತಿ­ದ್ದಂತೆ ಪಕ್ಷದ ಕಾರ್ಯಕರ್ತರು ಭಾನು­ವಾರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಸೇರಿ ವಿಜಯೋತ್ಸವ ಆಚರಿಸಿದ ಸಂದರ್ಭ ಅವರು ಮಾತನಾಡಿದರು. ಬಿಜೆಪಿ ಮುಖಂಡರಾದ ತಮ್ಮೇಶ್‌­ಗೌಡ, ಶ್ರೀನಿವಾಸರೆಡ್ಡಿ, ಲಕ್ಷ್ಮಿನಾರಾ­ಯಣ ಗುಪ್ತಾ ಮುಂತಾದವರು ವಿಜ­ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯೋತ್ಸವ
ಶಿಡ್ಲಘಟ್ಟ: ಬಿಜೆಪಿ ಕಾರ್ಯಕರ್ತರು ಭಾನುವಾರ ಪಟ್ಟಣದ ಕೋಟೆ ವೃತ್ತ­ದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

ದೆಹಲಿ, ರಾಜಾಸ್ತಾನ, ಮಧ್ಯ­ಪ್ರದೇಶ­ದಲ್ಲಿ ಕಾಂಗ್ರೆಸ್‌ ಪಕ್ಷ ಧೂಳೀ­ಪಟ­ವಾಗಿದೆ. ಛತ್ತೀಸ್‌ಗಢದಲ್ಲೂ ಹೆಚ್ಚು ಸ್ಥಾನ ಪಡೆಯಲು ಬಿಜೆಪಿ ಸಫಲವಾಗಿದ್ದು ಮುಂದಿನ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿ­ಯಾಗ­ಲಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಸುರೇಂದ್ರಗೌಡ ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಯಿರಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಶ್ರೀಧರ್, ದಾಮೋದರ್, ಖಂಡೇ­ರಾವ್, ತ್ಯಾಗರಾಜ್, ಮುನಿರತ್ನಮ್ಮ, ರತ್ಮಮ್ಮ ಮತ್ತಿತರರು ವಿಜಯೋತ್ಸವ­ದಲ್ಲಿ ಪಾಲ್ಗೊಂಡಿದ್ದರು.

ಲೋಕಸಭೆ ದಿಕ್ಸೂಚಿ
ಗೌರಿಬಿದನೂರು: ನವದೆಹಲಿ, ರಾಜ­ಸ್ತಾನ, ಛತ್ತೀಸ್‌ಗಡ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ನರೇಂದ್ರ ಮೋದಿ ಪ್ರಧಾನ ಮಂತ್ರಿಯಾದರೆ ಮಾತ್ರ ದೇಶಕ್ಕೆ ಭವಿಷ್ಯ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಂ.­ರವಿ­ನಾರಾಯಣರೆಡ್ಡಿ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಆರ್.ನರಸಿಂಹಮೂರ್ತಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಗೋಪಿನಾಥ್, ಸಣ್ಣಕ್ಕಿ ವೆಂಕಟರವಣಪ್ಪ, ಕೋಚಿಮುಲ್ ನಿರ್ದೇಶಕ ರಮೇಶ್, ಪುರಸಭೆ ಸದಸ್ಯ ಮೋಹನ್, ಗೋವಿಂದರಾಜು, ಸೊಸೈಟಿ ರಾಮಾಂಜಿ, ನಾಗರಾಜರೆಡ್ಡಿ, ಜಯಲಕ್ಷ್ಮಮ್ಮ, ಮುನಿಲಕ್ಷ್ಮಮ್ಮ, ಶೋಭಾ, ರಮೇಶ್ ರಾವ್, ಜಯಣ್ಣ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT