ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ವಿಳಂಬಕ್ಕೆ ಶಾಸಕ ಸುಧಾಕರ್ ಅಸಮಾಧಾನ

ಕಾಮಗಾರಿ ವೀಕ್ಷಣೆ
Last Updated 30 ಸೆಪ್ಟೆಂಬರ್ 2018, 11:20 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದಲ್ಲಿ ₹ 11.50 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡದ ಕಾಮಗಾರಿಯನ್ನು ಇತ್ತೀಚೆಗೆ ಶಾಸಕ ಡಾ.ಕೆ.ಸುಧಾಕರ್ ವೀಕ್ಷಿಸಿದರು.

ಕಾಮಗಾರಿ ವಿಳಂಬವಾಗುತ್ತಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಈ ಯೋಜನೆಗೆ ಎರಡು ವರ್ಷದ ಹಿಂದೆಯೇ ಅನುದಾನ ಮಂಜೂರಾಗಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಕಾಮಗಾರಿಯ ಶಂಕುಸ್ಥಾಪನೆಯನ್ನೂ ಸಹ ನೆರವೇರಿಸಲಾಗಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಇದು ನಗರದಲ್ಲಿ ಬೃಹತ್ ನ್ಯಾಯಾಲಯ ಸಂಕೀರ್ಣವಾಗಲಿದೆ. ಮುಂದಿನ ದಿನಗಳಲ್ಲಿ ಪಿಎಲ್‌ಡಿ ಬ್ಯಾಂಕ್ ಕಟ್ಟಡ, ಲೋಕೋಪಯೋಗಿ ಇಲಾಖೆ, ನಗರಸಭೆ ಕಟ್ಟಡ ಒಳಗೊಂಡಂತೆ ಇನ್ನೂ ಬೃಹತ್ ಹಾಗೂ ಹೈಟೆಕ್ ಕಟ್ಟಡಗಳ ನಿರ್ಮಾಣವಾಗಲಿವೆ’ ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳಕುಂಟೆ ಕೃಷ್ಣಮೂರ್ತಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಅಜಿತ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ್, ಗುತ್ತಿಗೆದಾರರಾದ ರಾಮಚಂದ್ರಪ್ಪ, ಸರ್ಕಾರಿ ಜಿಲ್ಲಾ ಅಭಿಯೋಜಕ ಪ್ರಕಾಶ್ ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT