ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗೆಹರಿಯದ ಪರವಾನಗಿ ಸಮಸ್ಯೆ

Last Updated 17 ಫೆಬ್ರುವರಿ 2012, 6:15 IST
ಅಕ್ಷರ ಗಾತ್ರ

ಚಿಂತಾಮಣಿ: ಬಸ್ ಸಂಚಾರ ಪರವಾನಗಿ ವಿಷಯವಾಗಿ ಪಟ್ಟಣದಲ್ಲಿ ಬುಧವಾರ ನಡೆದ ಪ್ರಾದೇಶಿಕ ಇಲಾಖೆ ಅಧಿಕಾರಿಗಳ ಹಾಗೂ ಬಸ್ ಮಾಲೀಕರ ಸಭೆಯಲ್ಲಿ ಸೂಕ್ತ ತೀರ್ಮಾನಕ್ಕೆ ಬರಲಾಗಲಿಲ್ಲ. ಇದರ ಪರಿಣಾಮ ಜಟಾಪಟಿ ಹಾಗೇ ಮುಂದುವರೆದಿದೆ.

ಇದೇ ವೇಳೆ ಎಸ್‌ಆರ್‌ಎಸ್ ಮತ್ತು ಅನ್ನಪೂರ್ಣೇಶ್ವರಿ ಬಸ್ ಮಾಲೀಕರ ನಡುವಿನ ಕಲಹ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿ ಉದ್ರಿಕ್ತ ವಾತಾವರಣ ಉಂಟಾಯಿತು. ಆಗ ಪೊಲೀಸರು ಮಧ್ಯ ಪ್ರವೇಶಿಸಿ ಸಮಾಧಾನ ಪಡಿಸಲು ಯತ್ನಿಸಿ ವಿಫಲವಾದರು.

ಬುಧವಾರ ಬೆಳಿಗ್ಗೆ ಬಸ್ ಮಾಲೀಕರ ನಡುವಿನ ಜಗಳ ವಿಕೋ ಪಕ್ಕೆ ತಿರುಗಿತ್ತು. ಖಾಸಗಿ ಬಸ್‌ಗಳು ಗ್ರಾಮಾಂತರ ಪ್ರದೇಶದಲ್ಲಿ ಸಂಚರಿಸುವುದಾಗಿ ಪರವಾನಗಿ ಪಡೆದು ಮುಖ್ಯ ರಸ್ತೆ ಯಲ್ಲಿ ಸಂಚರಿಸುತ್ತಿದ್ದರೂ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಕೆಲವು ಖಾಸಗಿ ಬಸ್‌ಗಳ ಮಾಲೀ ಕರೇ ಪರವಾನಗಿ ಹೊಂದಿರುವ ಮಾರ್ಗದಲ್ಲಿ ಸಂಚರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಮುಖ್ಯ ರಸ್ತೆಯಲ್ಲಿ ಸಂಚಾರದಿಂದ ಸರ್ಕಾರಿ ಬಸ್‌ಗಳ ಆದಾಯಕ್ಕೆ ಪೆಟ್ಟು ಬೀಳುತ್ತದೆ.
ಅದೇ ರೀತಿ ವಾಹನ ದಟ್ಟಣೆ ಕೂಡಾ ಹೆಚ್ಚಾಗುತ್ತದೆ. ಬಸ್ ಮಾಲೀಕರ ನಡುವಿನ ಕಿತ್ತಾಟದಿಂದ ಪ್ರಯಾಣಿಕರು ಸಂಕಷ್ಟ ಅನುಭವಿ ಸಬೇಕಾಗಿದೆ ಎನ್ನುವುದು ಸ್ಥಳೀಯರ ದೂರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT