ಗೌರಿಬಿದನೂರು: ದೇಶದಲ್ಲಿನ ಭ್ರಷ್ಟಾಚಾರ, ಬಡತನ ನಿರ್ಮೂಲನೆಗೆ ಯುವ ಸಮುದಾಯ ಜಾಗೃತರಾಗಬೇಕು ಎಂದು ತ್ಯಾಗೀಶಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ಎಇಎಸ್ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ವಿವೇಕಾನಂದರ ತತ್ವ ಆದರ್ಶಗಳನ್ನು ಯುವ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಹಿನ್ನಲೆಯಲ್ಲಿ ರಥಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 30 ಜಿಲ್ಲೆಗಲ್ಲಿ 220 ಕಾರ್ಯಕ್ರಮಗಳು ನೀಡುವ ಮೂಲಕ ಒಟ್ಟು 10 ಸಾವಿರ ಕಿಲೊ ಮೀಟರ್ ಯಾತ್ರೆ ಸಂಚರಿಸಲಿದೆ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎನ್.ನಿರಂಜನ್ ಮಾತನಾಡಿ, ವಿವೇಕಾನಂದರ ಆದರ್ಶಗಳನ್ನು ಯುವಕರು ಪಾಲಿಸಬೇಕು. ಅಧ್ಯಯನ ನಡೆಸಬೇಕು ಎಂದು ಕಿವಿಮಾತು ಹೇಳಿದರು.

ಮಹಾವಾಕ್ಯಾನಂದ ಸ್ವಾಮೀಜಿ, ಶಿವಸ್ವರೂಪನಂದ ಸ್ವಾಮೀಜಿ, ಪ್ರಾಧ್ಯಾಪಕ ವರಹಾಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ್, ಉಪನ್ಯಾಸಕ ಚಂದ್ರಶೇಖರ್, ಪುರಸಭೆ ಸದಸ್ಯರಾದ ವಿ.ರಮೇಶ್, ಚಿದಾನಂದಗುಪ್ತ, ನಾಗೇಶ್, ದಯಾನಂದ್, ವಿವಿಧ ಶಾಲಾ ಕಾಲೇಜು ಶಿಕ್ಷಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶನೈಶ್ಚರ ದೇಗುಲದ ಆವರಣದಿಂದ ರಥಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಮೆರವಣಿಗೆಯಲ್ಲಿ ವಿವೇಕಾನಂದರ ಜನ್ಮದಿನಾಚರಣೆ ಸಮಿತಿ ಸದಸ್ಯರು, ಶಾಲಾ ಮಕ್ಕಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.