ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ವಿಷಯದಲ್ಲಿ ಯಾವುದೇ ಭಿನ್ನಮತ ಅಥವಾ ಗೊಂದಲ ಇಲ್ಲ. ಅವರ ಆಯ್ಕೆಯನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ದೇಶದ ಜನರು ಸ್ವಾಗತಿಸಿದ್ದಾರೆ ಎಂದು ಸಂಸದ ಪಿ.ಸಿ.ಮೋಹನ್ ತಿಳಿಸಿದರು.

ನರೇಂದ್ರ ಮೋದಿಯವರ ಆಯ್ಕೆಯಿಂದ ಬಿಜೆಪಿಗೆ ಅಥವಾ ಎನ್ಡಿಎ ಮೈತ್ರಿಕೂಟಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಮೋದಿಯವರ ನಾಯಕತ್ವ ಮತ್ತು ಪ್ರಭಾವದಿಂದ ಬಿಜೆಪಿ ಮತ್ತು ಎನ್ಡಿಎ ಮೈತ್ರಿಕೂಟ ಹೆಚ್ಚಿನ ಸ್ಥಾನ ಗಳಿಸುತ್ತದೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೋದಿಯವರ ಆಯ್ಕೆಯಿಂದಾಗಿ ಆರಂಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಬೇರೆಬೇರೆ ಅಭಿಪ್ರಾಯಗಳು ವ್ಯಕ್ತವಾದವು. ಆದರೆ ಈಗ ಎಲ್ಲ ರೀತಿ ಸಮಸ್ಯೆ ಮತ್ತು ಗೊಂದಲ ನಿವಾರಣೆಯಾಗಿದ್ದು, ನರೇಂದ್ರ ಮೋದಿ ಆಯ್ಕೆಯನ್ನು ಸ್ವಾಗತಿಸಲಾಗಿದೆ ಎಂದು ಅವರು ತಿಳಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಸೋಲು ಅನುಭವಿಸಬೇಕಾಯಿತು ಎಂದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೇಸರಪಡುವ ಅಗತ್ಯವಿಲ್ಲ. ಪಕ್ಷ ಸಂಘಟನೆ ಮತ್ತು ಬಲಪಡಿಸುವ ಕಾರ್ಯದಲ್ಲಿ ಮುಖಂಡರು, ಕಾರ್ಯಕರ್ತರು ತೊಡಗಿಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸಾಧನೆ ಮಾಡಬಹುದು ಎಂದು ಅವರು ಹೇಳಿದರು.

ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಕೈಗೊಂಡ ಬಹುತೇಕ ಯೋಜನೆಗಳನ್ನು ಸ್ಥಗಿತಗೊಳಿಸಲು ಕಾಂಗ್ರೆಸ್ ಮುಂದಾಗಿರುವುದು ಖಂಡನೀಯ ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಂ.ರವಿನಾರಾಯಣರೆಡ್ಡಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.