ಗೌರಿಬಿದನೂರು: ತಾಲ್ಲೂಕಿನ ಹೆಗ್ಗೇನಹಳ್ಳಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನಡುವಿನ ತಿಕ್ಕಾಟದಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗುತ್ತಿರುವ ಶಿಕ್ಷಕರರನ್ನು ವರ್ಗಾವಣೆ ಮಾಡಬೇಕು ಎಂದು ಗ್ರಾಮಸ್ಥರು, ಪೋಷಕರು ಮಂಗಳವಾರ ಆಗ್ರಹಿಸಿದರು.

ಶಾಲೆ ಎದುರು ಜಮಾಯಿಸಿದ ಪೋಷಕರು, ಬಹುತೇಕ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮಕ್ಕಳೇ ಇಲ್ಲಿ ಕಲಿಯುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ಪಾಠ ಪ್ರವಚನಗಳು ನಡೆಯುತ್ತಿಲ್ಲ ಎಂದು ಪೋಷಕರು ಅಳಲು ತೋಡಿಕೊಂಡರು.

5ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ಕೇಳಿದರೆ ಹಿಂದಿನ ಶಿಕ್ಷಕರು ಮಕ್ಕಳಿಗೆ ಸಮರ್ಪಕವಾಗಿ ಪರೀಕ್ಷೆ ನಡೆಸಿಲ್ಲ ಎನ್ನುತ್ತಾರೆ. ಇದರಿಂದ ಏನ್ಮಾಡೋದು ತಿಳಿಯದಾಗಿದೆ ಎಂದು ಆಕ್ರೋಶದಿಂದ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೂಡಲೇ ಶಾಲೆಗೆ ಭೇಟಿ ನೀಡಿ ತಪ್ಪಿತಸ್ಥ ಶಿಕ್ಷಕರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಪಟ್ಟು ಹಿಡಿದರು. ನಂತರ ದೂರವಾಣಿ ಮೂಲಕ ಸಂಪರ್ಕಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.