ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಪಾತ್ರ ತುಂಬಾ ಹಿರಿದು: ಸರ್ಕಾರದ ಮುಖ್ಯ ಸಚೇತಕ ತೂಪಲ್ಲಿ ಚೌಡರೆಡ್ಡಿ

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ
Last Updated 6 ಮೇ 2019, 14:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮಕ್ಕಳ ಉಜ್ವಲ ಭವಿಷ್ಯತ್ತಿಗೆ ವಿದ್ಯಾಭ್ಯಾಸವು ಅತ್ಯಂತ ಪ್ರಮುಖವಾಗಿದ್ದು, ದೇಶದ ಉನ್ನತಿಗೆ ಆಸ್ತಿಯಾಗಬಲ್ಲ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು’ ಎಂದು ಸರ್ಕಾರದ ಮುಖ್ಯ ಸಚೇತಕ ತೂಪಲ್ಲಿ ಚೌಡರೆಡ್ಡಿ ಹೇಳಿದರು.


ನಗರದ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


‘ಶಿಕ್ಷಕ ವರ್ಗವು ಮಕ್ಕಳನ್ನು ಉತ್ತಮ ರೀತಿಯಲ್ಲಿ ವ್ಯಾಸಂಗದಲ್ಲಿ ತೊಡಗಿಸಿಕೊಂಡರೆ ಉತ್ತಮ ಫಲಿತಾಂಶ ಬರುತ್ತದೆ. ಅದಕ್ಕೆ ಅನೇಕ ಉದಾಹರಣೆಗಳಿವೆ. ವಿದ್ಯಾರ್ಥಿಗಳ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ಬೋಧಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.


ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಅನ್ವೇಷ್, ವಂದನಾ ಮತ್ತು ವಾಣಿಜ್ಯ ವಿಭಾಗದ ನಿಖಿಲ್ ಅವರಿಗೆ ನಗದು ಪುರಸ್ಕಾರ ನೀಡಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.


ಪೂರ್ಣಪ್ರಜ್ಞಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎನ್. ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರೆಡ್ಡೆಪ್ಪ, ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಗುತ್ತಿಗೆದಾರ ವೆಂಕಟೇಶ್, ವಿಷ್ಣುಪ್ರಿಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ರಾಮಚಂದ್ರ ರೆಡ್ಡಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT