ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ ಆದಿಗುರು

ತಾಲ್ಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಶಂಕರಾಚಾರ್ಯರ ಜಯಂತಿ ಆಚರಣೆ
Last Updated 9 ಮೇ 2019, 14:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸಮಾಜದಲ್ಲಿ ಮೇಲು ಕೀಳು ಎಂಬ ಭೇದಗಳನ್ನು ಬಿಟ್ಟು ಎಲ್ಲರೂ ಸಮಾನರು ಎಂದು ಸಾರಿದ ಆದಿಗುರು ಶಂಕರಾಚಾರ್ಯರು ಕೇವಲ ದಾರ್ಶನಿಕರಾಗಿರದೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ ಸಮಾಜ ಸುಧಾರಕರಲ್ಲಿ ಒಬ್ಬರಾಗಿದ್ದರು’ ಎಂದು ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ತಿಳಿಸಿದರು.

ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ತಾಲ್ಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಿದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅದ್ವೈತ ಸಿದ್ಧಾಂತಕ್ಕೆ ಒಂದು ತಾತ್ವಿಕ ನೆಲೆಗಟ್ಟನ್ನು ಒದಗಿಸಿ ಕೊಟ್ಟು ಅದನ್ನು ದರ್ಶಕದ ಮಟ್ಟಕ್ಕೆ ಕೊಂಡೊಯ್ದು ಪ್ರಚುರ ಪಡಿಸಿದ ಆದಿ ಶಂಕರರ ತತ್ವಾದರ್ಶನಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಬಿ.ಎಸ್. ವೆಂಕಟಾಚಲಪತಿ, ವಿಷಯ ಪರಿವೀಕ್ಷಕ ಉಪ ನಿರ್ದೇಶಕ ಆಂಜಿನಪ್ಪ ಉಪಸ್ಥಿರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT