ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು. ಎರಡೂ ಪಕ್ಷಗಳ ನಾಯಕರಿಂದ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಇಂದಿಗೂ ಸಾಧ್ಯವಾಗಿಲ್ಲ ಎಂದು ಡಿವೈಎಫ್ಐ ರಾಜ್ಯ ಘಟಕದ ಕಾರ್ಯದರ್ಶಿ ಬಿ.ರಾಜಶೇಖರಮೂರ್ತಿ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ‘ನಾವೆಲ್ಲ ಚೆನ್ನಾಗಿರಲು.....ಮೂವತ್ತು ನಿಮಿಷ ಮೀಸಲಿಡಿ ಪ್ಲೀಸ್’ ಎಂಬ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಯುಪಿಎ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಬಡವರ ಮತ್ತು ಜನಸಾಮಾನ್ಯರ ಜೀವನಮಟ್ಟ ಸುಧಾರಿಸುವಲ್ಲಿ ಎರಡೂ ಒಕ್ಕೂಟಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮರ್ಥ ಮತ್ತು ಸುಭದ್ರ ಆಡಳಿತ ನೀಡುವಲ್ಲಿ ವಿಫಲವಾಗಿರುವ ಯುಪಿಎ ನೇತೃತ್ವದ ಕೇಂದ್ರ ಸರ್ಕಾರವು ಕೋಟ್ಯಂತರ ರೂಪಾಯಿ ಮೌಲ್ಯದ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದೆ. ಎನ್ಡಿಎ ಮೈತ್ರಿಕೂಟದ ಅಧಿಕಾರದ ಅವಧಿಯಲ್ಲಿ ಯಾವುದೇ ಜನಪರ, ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದು ಟೀಕಿಸಿದರು.

ದೇಶದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲವಾಗಿದೆ. ನಿರುದ್ಯೋಗ, ಇತರ ಸಮಸ್ಯೆಗಳಿಂದ ಯುವಜನರು ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿದಾರಿಗೆ ಕರೆತಂದು ಜೀವನ ಸುಧಾರಿಸಲು ಸಹ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ದೇಶ ಎದುರಿಸುತ್ತಿರುವ ಹಲ ಗಂಭೀರ ಸಮಸ್ಯೆಗಳನ್ನು ಮರೆಮಾಚಿ, ಎಲ್ಲವೂ ಚೆನ್ನಾಗಿದೆ ಎಂಬ ಭ್ರಮೆ ಸೃಷ್ಟಿಸಲಾಗುತ್ತಿದೆ. ದೇಶದಲ್ಲಿ ವಾಸವಿರುವ ಜನರ ಸ್ಥಿತಿಗತಿ ಬಗ್ಗೆ ನಾಯಕರು ಗಮನಹರಿಸುತ್ತಿಲ್ಲ ಎಂದು ದೂರಿದರು.

‘ನಾವೆಲ್ಲ ಚೆನ್ನಾಗಿರಲು.....ಮೂವತ್ತು ನಿಮಿಷ ಮೀಸಲಿಡಿ ಪ್ಲೀಸ್’ ಎಂಬ ಪುಸ್ತಕವನ್ನು 10 ಲಕ್ಷ ಪ್ರತಿ ಮುದ್ರಿಸಲಾಗಿದೆ. ಇದರ ದರ ₨ 10 ನಿಗದಿಗೊಳಿಸಲಾಗಿದೆ. ಸೂಕ್ತ ಅಭ್ಯರ್ಥಿ ಆಯ್ಕೆಗಾಗಿ ಪ್ರಚಾರ ಮಾಡಲಾಗುವುದು. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸಿಪಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜಿ.ವಿ.ಶ್ರೀರಾಮರೆಡ್ಡಿ ಪರವಾಗಿ ಪ್ರಚಾರ ಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಡಿವೈಎಫ್ಐ ಜಿಲ್ಲಾ ಘಟಕದ ಕಾರ್ಯದರ್ಶಿ ಶಿವಪ್ಪ, ಮುಖಂಡರಾದ ದೇವರಾಜ್, ರಾಜ್ಯ ಸಮಿತಿ ಮುಖಂಡ ಕೃಷ್ಣಾರೆಡ್ಡಿ, ಬಾಗೇಪಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಹೇಮಚಂದ್ರ,ಕಾರ್ಯದರ್ಶಿ ಜಬೀವುಲ್ಲಾ, ಶಿಡ್ಲಘಟ್ಟದ ಸದನಂದ, ಚಿಂತಾಮಣಿಯ ನರಸಿಂಹಯ್ಯ, ಪೈಯಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.