ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಜ್ಜಂಪುರ ಕ್ರಾಸ್‌ನಲ್ಲಿ KSRTC ಐರಾವತ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

ಐರಾವತ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ
Published 14 ಮೇ 2024, 5:39 IST
Last Updated 14 ಮೇ 2024, 5:39 IST
ಅಕ್ಷರ ಗಾತ್ರ

ತರೀಕೆರೆ (ಚಿಕ್ಕಮಗಳೂರು ಜಿಲ್ಲೆ): ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್‌ನಲ್ಲಿ ಮಂಗಳವಾರ ನಸುಕಿನ ಜಾವ 1.30ರ ವೇಳೆಗೆ ಕೆಎಸ್‌ಆರ್‌ಟಿಸಿಯ ಐರಾವತ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೇ ಪಾರಾಗಿದ್ದಾರೆ.

ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟಿದ್ದ ಕೆಎ 01 ಎಫ್ 9077 ಸಂಖ್ಯೆಯ ಬಸ್‌ನಲ್ಲಿ ಸಿಬ್ಬಂದಿ ಸೇರಿ ಒಟ್ಟು 40 ಜನ ಪ್ರಯಾಣಿಸುತ್ತಿದ್ದರು. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್‌ ಚಾಲಕ ಬಸ್‌ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ಅಗ್ನಿಶಾಮಕ ಅಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬೆಂಕಿಯನ್ನು ನಂದಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ ಚಾಲಕ ಜಾಗರೂಕತೆ ವಹಿಸಿದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT