ತಲೆಮರೆಸಿಕೊಂಡಿರುವವರ ಪತ್ತೆಗೆ 2 ತಂಡ ರಚನೆ
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಎರಡು ತಂಡ ರಚಿಸಲಾಗಿದೆ.
ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 16 ಮಂದಿ ಹಾಗೂ ಕ್ರಷರ್ ಕೆಲಸಕ್ಕೆ ಬಾಲಕಿಯನ್ನು ನೇಮಿಸಿಕೊಂಡಿದ್ದಕ್ಕೆ ಕ್ರಷರ್ ಮಾಲೀಕ ಸಹಿತ ಒಟ್ಟು 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಬಾಲಕಿಯ ಚಿಕ್ಕಮ್ಮ ಸಹಿತ ಎಂಟು ಆರೋಪಿಗಳನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿದೆ. ಉಳಿದ ಒಂಬತ್ತು ಆರೋಪಿಗಳ ಪತ್ತೆಗೆ ಎರಡು ತಂಡಗಳು ತೆರಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಕ್ರಷರ್ ಘಟಕದಲ್ಲಿ ಕೆಲಸ ಮಾಡುವಾಗ ಬಾಲಕಿಗೆ ಪರಿಚಯವಾದವ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಷಯ ಬಾಯಿ ಬಿಟ್ಟರೆ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿದ್ದಾನೆ. ಆತನ ಹಲವು ಸ್ನೇಹಿತರು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ. ಬಾಲಕಿಯ ಹೇಳಿಕೆ ಪಡೆಯಲಾಗಿದೆ. ಈವರೆಗೆ 15 ಮಂದಿ ಹೆಸರು ಹೇಳಿದ್ದಾರೆ. ಕೃತ್ಯಕ್ಕೆ ಬಾಲಕಿಯ ಚಿಕ್ಕಮ್ಮನ ಕುಮ್ಮಕ್ಕು ಇರುವ ಗುಮಾನಿ ಇದೆ’ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಜಿ.ಸುಬ್ರಹ್ಮಣ್ಯ ‘ಪ್ರಜಾವಾಣಿ’ಗೆ ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.