ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆ ಕಾಮಗಾರಿ ಪರಿಶೀಲಿಸಿ: ಶಾಸಕ ಡಿ.ಎಸ್ .ಸುರೇಶ್

Last Updated 18 ಅಕ್ಟೋಬರ್ 2022, 12:29 IST
ಅಕ್ಷರ ಗಾತ್ರ

ತರೀಕೆರೆ: ಕ್ಷೇತ್ರದಲ್ಲಿ ₹50 ಕೋಟಿಗೂ ಅಧಿಕ ಅನುದಾನದಲ್ಲಿ ಸಿ.ಸಿ. ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರು ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಅವರು ಸಮೀಪದ ಕೆರೆಹೂಸಳ್ಳಿ ಗ್ರಾಮದ ಸಿ.ಸಿ. ರಸ್ತೆಗೆ ಭೂಮಿ ನೆರವೇರಿಸಿ ಮಾತನಾಡಿದರು.

ಈ ಗ್ರಾಮದ ಸಿ.ಸಿ. ರಸ್ತೆಗೆ ₹1.50 ಲಕ್ಷ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್. ಆನಂದಪ್ಪ ಮಾತನಾಡಿ, ಕ್ಷೇತ್ರದ 282 ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಕೋವಿಡ್ ಎದುರಾದರೂ ಶಾಸಕರು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ. ಬಿಜೆಪಿ ಸರ್ಕಾರ ಅಧಿಕಾರ ಅವಧಿಯಲ್ಲಿ ಉಬ್ರಾಣಿ-ಅಮೃತಾಪುರ ಯೋಜನೆಯಲ್ಲಿ ಅಮೃತಾಪುರ ಹೋಬಳಿಯ ಕೆರೆಗಳಿಗೆ ನೀರು ಹರಿಸುವ ಯೋಜನೆ ಮಾಡಿರುವುದನ್ನು ಸ್ಮರಿಸಿದರು.

ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಂಜಯ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯ ನವೀನ್, ಲಾವಣ್ಯ, ಶೋಭಾ, ಸೌಮ್ಯ, ಪಿಡಿಒ ಮಂಜಣ್ಣ, ಮುಖಂಡರಾದ ಚರಣ್, ಎಂಜಿನಿಯರ್ ಪುನೀತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT