ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Published : 25 ಸೆಪ್ಟೆಂಬರ್ 2024, 14:35 IST
Last Updated : 25 ಸೆಪ್ಟೆಂಬರ್ 2024, 14:35 IST
ಫಾಲೋ ಮಾಡಿ
Comments

ಕೊಪ್ಪ: ಕರ್ನಾಟಕ ಸಂಭ್ರಮ-50ರ ಅಂಗವಾಗಿ ತಾಲ್ಲೂಕು ಕೇಂದ್ರಕ್ಕೆ ಬಂದಿದ್ದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಬುಧವಾರ ಬೆಳಿಗ್ಗೆ ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವತಿಯಿಂದ ಮಾಲಾರ್ಪಣೆ ಮಾಡಿ ಸ್ವಾಗತಿಸಲಾಯಿತು.

ಬಳಿಕ ಪಟ್ಟಣದ ಬಸ್ ನಿಲ್ದಾಣದವರೆಗೆ ವೀರಗಾಸೆ ನೃತ್ಯದ ಕಲಾ ತಂಡದ ಮೂಲಕ ಮೆರವಣಿಗೆ ನಡೆಸಲಾಯಿತು.

ಮಂಗಳವಾರ ಸಂಜೆ ಕುದುರೆಗುಂಡಿಗೆ ಬಂದಿದ್ದ ರಥವನ್ನು ತಹಶೀಲ್ದಾರ್ ಲಿಖಿತಾ ಮೋಹನ್, ಇಒ ಎಚ್.ಡಿ.ನವೀನ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಎಂ.ಶ್ರೀಹರ್ಷ ಸ್ವಾಗತಿಸಿದರು. ಬುಧವಾರ ಮೆರವಣಿಗೆ ಬಳಿಕ ಸಿಹಿ ಹಂಚಿ ಸಂಭ್ರಮಿಸಲಾಯಿತು. ನಂತರ ಹರಿಹರಪುರ, ನಾರ್ವೆ, ಜಯಪುರ ಮೂಲಕ ಬಾಳೆಹೊನ್ನೂರು ಕಡೆಗೆ ರಥ ತೆರಳಲು ಬೀಳ್ಕೊಡಲಾಯಿತು.

ತಹಶೀಲ್ದಾರ್ ಲಿಖಿತಾ ಮೋಹನ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಜೆ.ಎಂ.ಶ್ರೀಹರ್ಷ, ಜಿಲ್ಲಾ ಕ.ಸಾ.ಪ ಪದಾಧಿಕಾರಿ ಎಸ್.ಎನ್.ಚಂದ್ರಕಲಾ, ತಾಲ್ಲೂಕು ಸಿರಿಗನ್ನಡ ವೇದಿಕೆ ಅಧ್ಯಕ್ಷ ಚಾವಲ್ಮನೆ ಸುರೇಶ್ ನಾಯಕ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಫ್ರಾನ್ಸಿಸ್ ಕಾರ್ಡೋಜ, ಬಿಇಒ ಜ್ಯೋತಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ.ರಾಜೇಂದ್ರ, ಪಟ್ಟಣ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಡಿವೈಎಸ್ಪಿ ಬಾಲಾಜಿ ಸಿಂಗ್, ಪಿ.ಎಸ್.ಐ ಜಿ.ಕೆ.ಬಸವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT