ಕೊಟ್ಟಿಗೆಹಾರ: ಇಲ್ಲಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಗೀತೆ ರಚನಾಕಾರ, ಸಂಗೀತ ನಿರ್ದೇಶಕ ಹಂಸಲೇಖ ಭಾನುವಾರ ಭೇಟಿ ನೀಡಿದರು. ಪ್ರತಿಷ್ಠಾನದ ವಸ್ತು ಸಂಗ್ರಹಾಲಯ, ಕೀಟ ಸಂಗ್ರಹಾಲಯ, ಕ್ಯಾಲಿಗ್ರಫಿ ಕಲಾಕೃತಿಗಳನ್ನು ವೀಕ್ಷಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಹಂಸಲೇಖ 'ಕುವೆಂಪು ಅವರ ಜನ್ಮದಿನದಂದು ಅವರ ಪುತ್ರ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಿದ್ದೇನೆ. ತೇಜಸ್ವಿ ಪ್ರತಿಷ್ಠಾನಕ್ಕೆ ನನ್ನ ಮೊದಲ ಭೇಟಿಯಾಗಿದೆ. ವಸ್ತು ಸಂಗ್ರಹಾಲಯವು ಗತಕಾಲದ ಅಪೂರ್ವ ಸಂಗ್ರಹವಾಗಿದೆ. ತೇಜಸ್ವಿ ಅವರ ಆದರ್ಶ ವ್ಯಕ್ತಿತ್ವ ಎಲ್ಲರಿಗೂ ಪ್ರೇರಣೆಯಾಗಲಿ. ಈ ವಸ್ತು ಭಂಡಾರ ಹಾಗೂ ಕೀಟ ಪ್ರಪಂಚವು ಮುಂದಿನ ಪೀಳಿಗೆಗೆ ಅಧ್ಯಯನ ವಸ್ತುವಾಗಲಿ’ ಎಂದರು.

ಗೋರವಿ ಆಲ್ದೂರು, ಎಂ.ಎಲ್. ಅಶೋಕ್, ಜಗದೀಶ್, ಅಜಿತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.