ಸೋಮವಾರ, ಸೆಪ್ಟೆಂಬರ್ 27, 2021
25 °C

ಲಂಚ; ಎಸಿಬಿ ಬಲೆಗೆ ಎಂಜಿನಿಯರ್‌ ಹನುಮಂತಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ(ಪಿಆರ್‌ಇಡಿ) ಕಾರ್ಯನಿರ್ವಾಹಕ ಎಂಜಿನಿಯರ್‌ ಹನುಮಂತಯ್ಯ (59) ಲಂಚ ಪಡೆಯುವಾಗ ಬುಧವಾರ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಸ್ತೆಯ ಕಾಮಗಾರಿ ಬಿಲ್‌ ಪಾಸ್ ಮಾಡಲು ಹನುಮಂತಯ್ಯ ಗುತ್ತಿಗೆದಾರನಿಗೆ ಲಂಚಕ್ಕೆ ₹ 20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ₹ 10 ಸಾವಿರ ಪಡೆಯುವಾಗ ಪೊಲೀಸರಿಗೆ ಸಿಕ್ಕಿ ಬಿದಿದ್ದಾರೆ.

ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಗುತ್ತಿಗೆದಾರ ಸತೀಶ್‌ ಎಂಬುವರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹನುಮಂತಯ್ಯನಿಂದ 2.75 ಲಕ್ಷ ನಗದು ವಶ ಪಡೆದಿದ್ದಾರೆ. ಆರೋಪಿಯ ವಿಚಾರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.