ಭಾನುವಾರ, ಸೆಪ್ಟೆಂಬರ್ 19, 2021
23 °C

ಕೆಂಗೇನಹಳ್ಳಿ ಬಳಿ ಮರಕ್ಕೆ ಕಾರು ಗುದ್ದಿ ವ್ಯಕ್ತಿ ಸಾವು, ನಾಲ್ವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ಕೆಂಗೇನಹಳ್ಳಿ ಬಳಿ ಭಾನುವಾರ ಸಂಜೆ ಮರಕ್ಕೆ ಕಾರು ಗುದ್ದಿ ಕಾರಿನಲ್ಲಿದ್ದ ಒಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಸಂಜೆ 6ಕ್ಕೆ ಅವಘಡ ಸಂಭವಿಸಿದೆ. ಚಿಕ್ಕಮಗಳೂರಿನ ಕೋಟೆ ನಿವಾಸಿ ಕಿಶೋರ್ (23) ಮೃತಪಟ್ಟವರು. ಕೋಟೆಯ ವಿನಯ್, ಮನು, ಸಂದೀಪ್, ರಾಹುಲ್ ಗಾಯಗೊಂಡವರು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಹುಲ್ ಅವರ ಹೊಸ ಕಾರಿನಲ್ಲಿ ಐವರು ಕಡೂರು ಕಡೆಗೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಖರಾಯಪಟ್ಡಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು