ಮೂಡಿಗೆರೆ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಭಾನುವಾರ ತಡರಾತ್ರಿ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿದ್ದಾರೆ. ಮೂಡಿಗೆರೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರು ಮತ್ತು ಕೊಟ್ಟಿಗೆಹಾರದ ಕಡೆ ಹೋಗುತ್ತಿದ್ದ ಲಾರಿ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಹಂಪೆಯ ವೇದಮ್ಮ(55) ಜ್ಞಾನಮ್ಮ(70), ಮಂಜುಳಾ(50) ಹಾಗೂ ರೇಣುಕಾ(26) ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಿಂದ ಭಾನುವಾರ ರಾತ್ರಿ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ತೆರಳಿದ ಪೊಲೀಸರು, ಅಪಘಾತದಲ್ಲಿ ಲಾರಿಯ ಕೆಳಗೆ ಸಿಲುಕಿದ್ದ ಕಾರನ್ನು ತೆರವು ಮಾಡಿ, ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.