ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ: ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಬಸ್: ಮಹಿಳೆ ಸಾವು,ಹಲವರಿಗೆ ಗಾಯ

Published 4 ನವೆಂಬರ್ 2023, 14:52 IST
Last Updated 4 ನವೆಂಬರ್ 2023, 14:52 IST
ಅಕ್ಷರ ಗಾತ್ರ

ಮೂಡಿಗೆರೆ (ಚಿಕ್ಕಮಗಳೂರು): ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸ ಹೊರಟಿದ್ದ ಖಾಸಗಿ ಬಸ್ಸೊಂದು ಶನಿವಾರ ನಸುಕಿನಲ್ಲಿ ತಾಲ್ಲೂಕಿನ ಕಸ್ಕೆಬೈಲ್ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ (45) ಮೃತರು.  ಬಸ್‌ನಲ್ಲಿದ್ದ 17 ಜನ ಗಾಯಗೊಂಡಿದ್ದಾರೆ.

ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್‌ನಲ್ಲಿ 48 ಜನ ಪ್ರವಾಸಿಗರು ಇದ್ದರು. ಬೆಳಿಗಿನ ಜಾವ 4 ಗಂಟೆ ಸುಮಾರಿನಲ್ಲಿ ಬೇಲೂರು ಕಡೆಯಿಂದ ವೇಗವಾಗಿ ಬಂದ ಬಸ್‌, ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಾಫಿ ತೋಟಕ್ಕೆ ಉರುಳಿದೆ. ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಬಂದು ಗಾಯಾಳುಗಳನ್ನು ರಕ್ಷಿಸಿ ಪಟ್ಟಣದ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಡೆಗೋಡೆ ನಿರ್ಮಿಸಲು ಸಾರ್ವಜನಿಕರ ಒತ್ತಾಯ: ಚೀಕನಹಳ್ಳಿ–ಕಸ್ಕೆಬೈಲು ನಡುವಿನ ಈ ತಿರುವಿನಲ್ಲಿ ಇತ್ತೀಚೆಗೆ 20ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಸಂಬಂಧಿಸಿದವರಿಗೆ ಮನವಿ ಮಾಡಿದ್ದರೂ, ಹೆದ್ದಾರಿ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಡೆಗೋಡೆ ನಿರ್ಮಾಣವಾಗಿಲ್ಲ. ಆದ್ದರಿಂದ ವಾಹನಗಳು ಪ್ರಪಾತಕ್ಕೆ ಬೀಳುತ್ತಿದ್ದು ,ಕೂಡಲೇ ವೈಜ್ಞಾನಿಕವಾಗಿ ತಡೆಗೋಡೆ ನಿರ್ಮಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT