ಮಂಗಳವಾರ, ಜನವರಿ 31, 2023
19 °C
ವಾಲ್ಮೀಕಿ ಜಯಂತಿಯಲ್ಲಿ ಶಾಸಕ ಎಂ.ಪಿ. ಕುಮಾರಸ್ವಾಮಿ

‘ರಾಮಾಯಣದ ಜೀವನ ಮೌಲ್ಯ ಅಳವಡಿಸಿಕೊಳ್ಳಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಮೂಡಿಗೆರೆ: ರಾಮಾಯಣದಲ್ಲಿರುವ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿ
ಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಒಬ್ಬ ವ್ಯಕ್ತಿಯು ಆದರ್ಶ ವ್ಯಕ್ತಿಯಾಗಿ ಬಾಳಬೇಕಾದ ಸೂತ್ರಗಳನ್ನು ರಾಮಾಯಣದಲ್ಲಿ ನೀಡಲಾಗಿದೆ. ಇಂತಹ ರಾಮಾಯಣ
ವನ್ನು ನೀಡಿದ ಮಹರ್ಷಿ ವಾಲ್ಮೀಕಿಯು ಸರ್ವಶ್ರೇಷ್ಠರಾಗಿದ್ದಾರೆ’ ಎಂದರು.

ಮಹಾತ್ಮರನ್ನು ಯಾವುದೇ ಒಂದು ಜಾತಿಗೆ ಸೀಮಿತವಾಗಿಸದೇ, ಅವರು ಹಾಕಿಕೊಟ್ಟ ಮಾರ್ಗವನ್ನು ಅನುಸರಿಸುವ ಮೂಲಕ ಮಾದರಿ ವ್ಯಕ್ತಿಗಳಾಗಬೇಕು’ ಎಂದರು.

ಶಿಕ್ಷಕ ಮಂಜಪ್ಪ ಮಾತನಾಡಿ, ‘ರಾಮಾಯಣವು ಜನರ ಮನಸ್ಸಿನಲ್ಲಿ ಅಗಾಧವಾಗಿ ಪರಿಣಾಮ ಬೀರುವ ಮಹಾ ಕಾವ್ಯವಾಗಿದೆ. ಪ್ರತಿ
ಯೊಬ್ಬರೂ ರಾಮಾಯಣವನ್ನು ಓದಿ ಅದರಂತೆ ನಡೆದರೆ ಉತ್ತಮ ಸಮಾಜ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ’ ಎಂದು ಮಹರ್ಷಿ ವಾಲ್ಮೀಕಿಯವರ ಜೀವನ ವೃತ್ತಾಂತವನ್ನು ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ದೌರ್ಜನ್ಯ ತಡೆ ಸಮಿತಿ ಸದಸ್ಯ ಮಹಾಬಲ, ತಹಶೀಲ್ದಾರ್ ನಾಗರಾಜ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಡಿ. ಡಿ. ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸೀತಮ್ಮ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಕುಮಾರ್ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು