ಬುಧವಾರ, ಮೇ 27, 2020
27 °C

ಪರಿಸರ ಪ್ರೇಮ ಮೈಗೂಡಿಸಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಸಿ ನೆಟ್ಟರು. ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿಲ್ಪಾ, ಸಂಸ್ಥೆಯ ಕಾರ್ಯಾಧ್ಯಕ್ಷ ಜಗದೀಶ್ ಇದ್ದಾರೆ.

ಚಿಕ್ಕಮಗಳೂರು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪರಿಸರ ಕಾಳಜಿ ರೂಢಿಸಿಕೊಳ್ಳಬೇಕು ಎಂದು ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಸಲಹೆ ಮಾಡಿದರು.

ನಗರದ ಶ್ರೀ ಗುರುಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಬುಧವಾರ ಏರ್ಪಡಿಸಿದ್ದ ವನಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೂರ್ವಿಕರು ಪರಿಸರವನ್ನು ದೇವರೆಂದು ಪೂಜಿಸುತ್ತಿದ್ದರು. ಗಿಡ, ಮರಗಳನ್ನು ಪೋಷಿಸುತ್ತಿದ್ದರು. ಉತ್ತಮ ಪರಿಸರದಿಂದ ಸಕಾಲಕ್ಕೆ ಮಳೆಯಾಗುತ್ತಿತ್ತು. ಭೂಮಿ ಸಮೃದ್ಧವಾಗಿರುತ್ತಿತ್ತು. ಜನರು ಉತ್ತಮ ಆರೋಗ್ಯ ಹೊಂದಿದ್ದರು. ವಿದ್ಯಾರ್ಥಿಗಳು ಅದನ್ನು ಮನಗಾಣಬೇಕು. ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು ಎಂದರು.

ಆಧುನಿಕತೆ ಭರಾಟೆಗೆ ಗಿಡ, ಮರಗಳು ನಾಶವಾಗುತ್ತಿವೆ. ಅದರಿಂದ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತಿದೆ. ಅತಿವೃಷ್ಠಿ, ಅನಾವೃಷ್ಠಿ ಉಂಟಾಗುತ್ತಿದೆ. ಮನುಷ್ಯನ ಆಯಸ್ಸು ಕಡಿಮೆಯಾಗಿದೆ ಎಂದರು.

ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿಲ್ಪಾ ಮಾತನಾಡಿ, ಮನುಷ್ಯ ಜೀವಿಸಲು ಆಮ್ಲಜನಕ ಅತ್ಯಗತ್ಯ. ಆಮ್ಲಜನಕವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಸಿಗಳನ್ನು ಹೆಚ್ಚು ನೆಟ್ಟು ಪೋಷಿಸಬೇಕು ಎಂದರು.

ನಿವೃತ್ತ ನ್ಯಾಯಾಧೀಶ ಕೆಂಪನ ಗೌಡರ್, ನಿವೃತ್ತ ಪೊಲೀಸ್ ಇನ್‌ಸ್ಪೆಕ್ಟರ್ ಬಾಲಚಂದ್ರ, ಪ್ರಾಧ್ಯಾಪಕ ಓಂಕಾರಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಸಿ.ಶಿವಾನಂದ ಸ್ವಾಮಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಸದಾನಂದ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು