ಅಜ್ಜಂಪುರ: ಜಾನಪದ ಮಹಿಳಾ ಪ್ರಧಾನವಾದದ್ದು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಅಭಿಪ್ರಾಯಪಟ್ಟರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ತಾಲ್ಲೂಕು ಮಹಿಳಾ ಘಟಕ ವತಿಯಿಂದ ಈಚೆಗೆ ನಡೆದ ಪದಪ್ರಧಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದದ ಎಲ್ಲಾ ಆಯಾಮಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಭೌತಿಕ ಪರಂಪರೆ ಗೀತೆಗಳು ಮಹಿಳೆಯರಿಂದಲೇ ಪೋಷಿಸಲ್ಪಡುತ್ತಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕಾರ್ಯವು ಅವರಿಂದಲೇ ಆಗುತ್ತಿದೆ ಎಂದರು.

ಶಿಶು ಪ್ರಾಸ ಗೀತೆ, ದೂರಿ ಪದ, ತೊಟ್ಟಿಲು ಪದಗಳು ಇಂದು ಅಳಿವಿನಂಚಿನಲ್ಲಿವೆ. ಅದನ್ನು ತರಬೇತಿಯ ಮೂಲಕ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಆಗಬೇಕಿದೆ ಎಂದರು.

ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ವಿಶಾಲಾಕ್ಷಮ್ಮ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಹಿಳಾ ಘಟಕ ಸ್ಥಾಪನೆಯಾಗಿವೆ. ಹೋಬಳಿ ಹಾಗೂ ಗ್ರಾಮ ಘಟಕಗಳನ್ನು ಶೀಘ್ರದಲ್ಲಿ ರಚಿಸಲಾಗುವುದು ಎಂದು ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಇಒ ವಿಜಯ್ ಕುಮಾರ್, ಜಾನಪದ ಸಾಹಿತ್ಯ ದಾಖಲೀಕರಣ ಮಾಡಬೇಕಿದೆ. ಗ್ರಂಥ ರೂಪದಲ್ಲಿ ತರಬೇಕಿದೆ ಎಂದು ಸಲಹೆ ನೀಡಿದರು.

ಪರಿಷತ್ ಮಹಿಳಾ ಘಟಕ ಜಿಲ್ಲಾ ಗೌರವಾಧ್ಯಕ್ಷೆ ಸವಿತಾ ಸತ್ಯನಾರಾಯಣ, ಜಾನಪದ ಶ್ರೀ ಪ್ರಶಸ್ತಿ ಪುರಸ್ಕೃತ ಕಲಾವಿದೆ ಲಕ್ಷ್ಮೀದೇವಮ್ಮ ಮಾತನಾಡಿದರು.

ಇದೇ ವೇಳೆ ಪುಷ್ಪ ಅವರಿಗೆ ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆಯಾಗಿ ಹಾಗೂ ನಿಕಟಪೂರ್ವ ಅಧ್ಯಕ್ಷೆ ವಿಜಯಕುಮಾರಿ ಅವರಿಗೆ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಪದಪ್ರಧಾನ ಮಾಡಲಾಯಿತು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರತಿಮಾ ಸೋಮಶೇಖರ್, ಪರಿಷತ್ ರಾಮನಗರ ಜಿಲ್ಲಾಧ್ಯಕ್ಷ ಕೆ.ಸಿ.ಕಾಂತಪ್ಪ, ಜಿಲ್ಲಾ ಸಂಚಾಲಕಿ ಆಶಾ ನವೀನ್, ರಂಜಿತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.