ಅಜ್ಜಂಪುರ: ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಇದೇ 28ರಂದು ಜಿಲ್ಲಾ ಮಟ್ಟದ ಕಾಂಗ್ರೆಸ್ ನವಸಂಕಲ್ಪ ಚಿಂತನಾ ಶಿಬಿರ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಅಂಶುಮಂತ್ ಹೇಳಿದರು.

ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಶನಿವಾರ ನಡೆದ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಎಐಸಿಸಿ ಮತ್ತು ಕೆಪಿಸಿಸಿ ಸೂಚನೆ ಹಿನ್ನೆಲೆಯಲ್ಲಿ ಚಿಂತನಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲೆಯ 300ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸುವರು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ ಮಾತನಾಡಿ, ಶಿಬಿರದಲ್ಲಿ ಪಕ್ಷ ಸಂಘಟನೆ, ಪಕ್ಷ ಮುನ್ನೆಡೆಸುವ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಮಾಜಿ ಶಾಸಕರಾದ ಎಸ್.ಎಂ.ನಾಗರಾಜ್, ಟಿ.ಎಚ್. ಶಿವಶಂಕರಪ್ಪ, ಜಿ.ಎಚ್.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂಕುಶ್ ಆನಂದ್ ಕುಮಾರ್, ಪುರಸಭೆ ಅಧ್ಯಕ್ಷ ಕೆ.ಪಿ.ಗೋಪಿನಾಥ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸಂತೋಷ್, ಜಿ.ನಟರಾಜ್, ಲೋಹಿತ್, ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.