ಅಜ್ಜಂಪುರ: ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ದಲಿತರನ್ನು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ದಲಿತ ಸಂಘಟನೆ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ದಲಿತ ಸಂಘಟನೆ ಮುಖಂಡ ಸುನಿಲ್ ದೋರನಾಳು, ‘ಶಿವನಿ ಗ್ರಾಮದಲ್ಲಿ ಈಚೆಗೆ ಸರ್ಕಾರಿ ಕಾಮಗಾರಿ ಭೂಮಿಪೂಜೆ ವೇಳೆ ಸರ್ಕಾರ ಹನಿ ನೀರಾವರಿಗೆ ಪರಿಕರಗಳನ್ನು ನೀಡಿದೆ. ಆದರೆ ದಲಿತರು ಅವುಗಳನ್ನು ಚಟಕ್ಕಾಗಿ ಮಾರಾಟ ಮಾಡಿದ್ದಾರೆ ಎಂದು ಶಾಸಕ ಶ್ರೀನಿವಾಸ್ ಹೇಳಿದ್ದಾರೆ. ಆ ಮೂಲಕ ದಲಿತರನ್ನು ಅಪಮಾನಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನಾ ನಿರತರು, ಪಟ್ಟಣ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ನೀಡಿದರು.

ದಲಿತ ಮುಖಂಡ ಬಸವರಾಜ ಬಗ್ಗವಳ್ಳಿ, ಓಂಕಾರಪ್ಪ, ಮಹಾಂತೇಶ, ಭಕ್ತನಕಟ್ಟೆ ಕೃಷ್ಣಮೂರ್ತಿ, ನಾಗರಾಜ್, ಶ್ರುತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-126-734627122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.