ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಾಪುರ ಹೊಸೂರು: ರಸ್ತೆ ಕಾಮಗಾರಿಗೆ ಭೂಮಿ ಪೂಜೆ

Last Updated 26 ಡಿಸೆಂಬರ್ 2022, 3:43 IST
ಅಕ್ಷರ ಗಾತ್ರ

ಅಜ್ಜಂಪುರ: ‘ತರೀಕೆರೆಯಲ್ಲಿ 100 ಹಾಸಿಗೆಯ ತಾಯಿ ಮಗುವಿನ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಜನವರಿಯಲ್ಲಿ ಭೂಮಿ ಪೂಜೆ ನೆರವೇರಿಸಲಾಗುವುದು’ ಎಂದು ಶಾಸಕ ಡಿ.ಎಸ್. ಸುರೇಶ್ ತಿಳಿಸಿದರು.

ತಾಲ್ಲೂಕಿನ ವೀರಾಪುರ ಹೊಸೂರು ಗ್ರಾಮದಲ್ಲಿ ಭಾನುವಾರ ₹ 40 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮದಲ್ಲಿ ಪಡಿತರ ವಿತರಣಾ ಕೇಂದ್ರ ತೆರೆಯಲು ಸೂಚಿಸಲಾಗುವುದು. ಗ್ರಂಥಾಲಯ ಆರಂಭಿಸಲು ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗೆ ನಿರ್ದೇಶನ ನೀಡಲಾಗುವುದು. ಭದ್ರಾ ಜಲಾಶಯದಿಂದ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್. ಆನಂದಪ್ಪ, ಶಾಸಕರು, ಕೊಟ್ಟ ಮಾತಿನಂತೆ ಚರಂಡಿ, ಸಿಸಿ ರಸ್ತೆಗೆ ಅನುದಾನ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅವರಿಗೆ ಸಹಕಾರ ನೀಡಿ ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್, ಗ್ರಾಮದಲ್ಲಿ ಗ್ರಂಥಾಲಯ ನಿರ್ಮಿಸಬೇಕು. ಕುಡಿಯುವ ನೀರು ಮತ್ತು ಬಸ್ ವ್ಯವಸ್ಥೆ ಕಲ್ಪಿಸಬೇಕು. ಬೀರೂರು ಮುಖ್ಯ ರಸ್ತೆಯಿಂದ ಗ್ರಾಮವನ್ನು ಸಂಪರ್ಕಿಸುವ ರಸ್ತೆ ಅಭಿವೃದ್ದಿಪಡಿಸಬೇಕು. ಜಾನುವಾರು ಸಂಖ್ಯೆ ಹೆಚ್ಚಿದ್ದು, ಪಶು ವೈದ್ಯರನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದರು.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅಧಿಕ ಅಂಕ ಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT