ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಜ್ಜಂಪುರ: ಕೋಟ್ಪಾ ಅಡಿ 39 ಪ್ರಕರಣ

Published 9 ಜುಲೈ 2024, 13:09 IST
Last Updated 9 ಜುಲೈ 2024, 13:09 IST
ಅಕ್ಷರ ಗಾತ್ರ

ಅಜ್ಜಂಪುರ: ಜಿಲ್ಲಾ ತಂಬಾಕು ನಿಯಂತ್ರಣ ಕೋಶಾಧಿಕಾರಿಗಳು ಕಾನೂನು ಬಾಹಿರವಾಗಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಂಗಳವಾರ ದಾಳಿ ನಡೆಸಿದರು.

ಶಾಲಾ ಆವರಣದ 100 ಗಜ ಅಂತರದೊಳಗೆ ಸಿಗರೇಟು, ಗುಟ್ಕಾ ಮಾರಾಟ ಮಾಡುತ್ತಿದ್ದ 39 ಅಂಗಡಿ ಮಾಲೀಕರಿಗೆ ದಂಡ ವಿಧಿಸಿದರು. ₹4,050 ದಂಡ ವಸೂಲಿ ಮಾಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ದಿನೇಶ್, ರಾಘವೇಂದ್ರ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಶಿಕ್ಷಣಾಧಿಕಾರಿ ಪ್ರಕಾಶ್, ಪೊಲೀಸ್ ಇಲಾಖೆಯ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಆರ್.ಕೆ.ಎಸ್.ಕೆಯ ಕೋಲಾರಪ್ಪ ತಂಡ ದಾಳಿ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT