ಅಜ್ಜಂಪುರ: ‘ಸಂಸ್ಕಾರ ಮತ್ತು ಸಚ್ಚಾರಿತ್ರ್ಯದಿಂದ ಮಾತ್ರ ಬದುಕನ್ನು ಶ್ರೀಮಂತಗೊಳಿಸಲು ಸಾಧ್ಯ. ಗುರುವಿನ ಜ್ಞಾನ ಬೋಧಾಮೃತದಿಂದ ಮಾನವ ಜೀವನ ಉಜ್ವಲಗೊಳ್ಳುತ್ತದೆ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಚನ್ನಾಪುರದಲ್ಲಿ ಸೋಮವಾರ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಧರ್ಮ, ಸಂಸ್ಕೃತಿ, ಸಭ್ಯತೆ, ಸದ್ಗುಣ ಮತ್ತು ಸಂಸ್ಕಾರ ಜನರ ನಿಜವಾದ ಆಸ್ತಿಯೆಂದು ರೇಣುಕಾಚಾರ್ಯರು ಬೋಧಿಸಿದ್ದಾರೆ. ಹೊರಗಿನ ಸಿರಿ ಸಂಪತ್ತು ಹೆಚ್ಚುತ್ತಿದೆಯೇ ವಿನಾ, ಒಳಗಿನ ಜ್ಞಾನ ಬೆಳೆಯುತ್ತಿಲ್ಲ. ನಾಗರಿಕತೆಯ ಹೆಸರಿನಲ್ಲಿ ನಿಜವಾದ ಜೀವನ ಮೌಲ್ಯಗಳು ಕಣ್ಮರೆಯಾಗಬಾರದು’ ಎಂದರು.

ಮುಖಂಡ ಡಿ.ಎಸ್. ಸುರೇಶ್, ಜಗತ್ತಿನಲ್ಲಿ ಆತಂಕ ಮತ್ತು ಭಯದ ವಾತಾವರಣ ಆವರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅರಿವಿನ ಕಣ್ಣು ತೆರೆಸಲು ರೇಣುಕಾಚಾರ್ಯರ ವಿಚಾರಧಾರೆ ಸಹಕಾರಿಯಾಗಿವೆ ಎಂದರು.

ತಾಲ್ಲೂಕು ಜಂಗಮ ಸಮಾಜದ ಅಧ್ಯಕ್ಷ ಎನ್.ವಿ. ಗಂಗಾಧರಯ್ಯ ಮಾತನಾಡಿದರು. ಚಿಕ್ಕಮಗಳೂರು ಕುಮಾರಸ್ವಾಮಿ ಅವರು ಉಪನ್ಯಾಸ ನೀಡಿದರು. ಎಡೆಯೂರು ರೇಣುಕ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ತೆಂಡೇಕೆರೆ ಗಂಗಾಧರ ಶಿವಾಚಾರ್ಯರು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು, ನಂದಿಪುರ ನಂದೀಶ್ವರ ಶಿವಾಚಾರ್ಯರು, ಬೀರೂರು ರುದ್ರಮುನಿ ಶಿವಾಚಾರ್ಯರು, ಹಣ್ಣೆಯ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯರು, ತಾವರೆಕೆರೆ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು.

ಎನ್.ಡಿ. ಪರಮೇಶ್ವರಪ್ಪ, ಬಗ್ಗವಳ್ಳಿಯ ಬಿ.ಎಸ್. ರಾಜು, ಗರಗದಹಳ್ಳಿ ಪ್ರತಾಪ್, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಎಚ್.ಎಂ. ಲೋಕೇಶ್, ಬಡಗನಾಡು ಹೇಮರೆಡ್ಡಿ ಸಮಾಜ ಅಧ್ಯಕ್ಷ ಎಚ್.ಸಿ. ರೇವಣಸಿದ್ದಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್. ಆನಂದಪ್ಪ, ಸಿ.ಎಸ್. ಸಿದ್ದೇಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-126-1852169508

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.