ಅಜ್ಜಂಪುರ: ‘ಸ್ವಾತಂತ್ರ್ಯಾ ನಂತರದ ಭಾರತಕ್ಕೆ ಸಂವಿಧಾನದ ಮೂಲಕ ಭದ್ರ ಬುನಾದಿ ಹಾಕಿದ ಶ್ರೇಯಸ್ಸು ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ವತಿಯಿಂದ ಮಂಗಳವಾರ ನಡೆದ ಅಂಬೇಡ್ಕರ್ ಹಾಗೂ ಜಗಜೀವನ್ ರಾಂ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ಮಾಳೇನಹಳ್ಳಿ ಗ್ರಾಮಕ್ಕೆ ಶ್ರಮಿಕರ ಶಾಲೆ ಹಾಗೂ ಪಟ್ಟಣದ ಶೆಟ್ರು ಸಿದ್ದಪ್ಪ ಪದವಿ ಪೂರ್ವ ಕಾಲೇಜು ಹೈಸ್ಕೂಲ್ ವಿಭಾಗಕ್ಕೆ ಕೆಪಿಎಸ್ ಶಾಲೆ ಮಂಜೂರಾಗಿದೆ ಎಂದು ತಿಳಿಸಿದರು.

ವಕೀಲ ಜಯಪ್ರಕಾಶ್ ನಾರಾಯಣ್ ಅಂಬೇಡ್ಕರ್ ಬಗ್ಗೆ ಮಾತನಾಡಿದರು.

ತಹಶೀಲ್ದಾರ್ ವಿನಾಯಕ ಸಾಗರ್ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.

ದಲಿತ ಮುಖಂಡ ಮಹೇಂದ್ರ ಸ್ವಾಮಿ, ಅಂಬೇಡ್ಕರ್ ಭವನಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕರನ್ನು ಒತ್ತಾಯಿಸಿದರು.

ತಾಲ್ಲೂಕು ಪಂಚಾಯಿತಿ ಇಒ ವಿಜಯ್ ಕುಮಾರ್ ಸಂವಿಧಾನ ಪೀಠಿಕೆ ಬೋಧಿಸಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಇದಕ್ಕೂ ಮುನ್ನ ಪ್ರಮುಖ ರಸ್ತೆಗಳಲ್ಲಿ ಇಬ್ಬರು ನಾಯಕರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.

ಮುಖಂಡರಾದ ಜಿ. ನಟರಾಜ್, ಮಹೇಂದ್ರಾಚಾರ್, ಶಾಂತ ಕುಮಾರ್, ತಿಪ್ಪೇಶ್ ಮಡಿವಾಳ್, ಗುರುಮೂರ್ತಿ, ಗಂಗಾಧರಪ್ಪ, ಸರ್ಕಾರಿ ನೌಕರ ಸಂಘ ತಾಲ್ಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಲಿಂಗಮೂರ್ತಿ, ಯೋಗೀಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-126-15329137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.