ಅಜ್ಜಂಪುರ: ‘ಪಟ್ಟಣದಲ್ಲಿ ಜೂನ್ ಎರಡನೇ ವಾರ ಜಿಲ್ಲಾಮಟ್ಟದ ಮೊದಲ ಮಹಿಳಾ ಜಾನಪದ ಸಮ್ಮೇಳನ ಆಯೋಜಿಸಲಾಗುವುದು’ ಎಂದು ಮಹಿಳಾ ಜಾನಪದ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷೆ ವಿಶಾಲಾಕ್ಷಮ್ಮ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಭಾಗವಾಗಿ ಮೆರವಣಿಗೆ, ಜಾನಪದ ಗೋಷ್ಠಿ, ಬಹಿರಂಗ ಅಧಿವೇಶನ ಜರುಗಲಿದೆ. ಇದೇ ವೇಳೆ ಜಿಲ್ಲೆಯಲ್ಲಿ ಎಲೆಮರೆಯ ಕಾಯಂತಿರುವ 50ಕ್ಕೂ ಹೆಚ್ಚು ಮಹಿಳಾ ಕಲಾವಿದರನ್ನು ಗುರುತಿಸಿ, ಗೌರವಿಸಲಾಗುವುದು ಎಂದರು.

ಪರಿಷತ್ನ ಜಂಟಿ ಕಾರ್ಯದರ್ಶಿ ವಿಜಯಕುಮಾರಿ ಮಾತನಾಡಿ, ಸಮ್ಮೇಳನದ ಅಧ್ಯಕ್ಷೆ, ಅತಿಥಿಗಳು, ಕಲಾತಂಡ, ಪ್ರಶಸ್ತಿ ಪುರಸ್ಕೃತರು, ಮಹಿಳೆಯರೇ ಆಗಿರುತ್ತಾರೆ ಎಂದು ಮಾಹಿತಿ ನೀಡಿದರು.

ಪರಿಷತ್ನ ತಾಲ್ಲೂಕು ಘಟಕದ ಅಧ್ಯಕ್ಷೆ ಬಿ.ಕೆ. ಪುಷ್ಪ, ಪರಿಷತ್ ಸದಸ್ಯರು ನೀಡಲಾದ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಸಮ್ಮೇಳನದ ಯಶಸ್ಸಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷೆ ಕವಿತಾ ಕೇಶವಮೂರ್ತಿ, ಮಹಿಳಾ ಕಲಾವಿದರಿಗೆ ವೇದಿಕೆ ಕಲ್ಪಿಸುವ ಸಮ್ಮೇಳನ, ಆಕರ್ಷಣೀಯ ಹಾಗೂ ಅರ್ಥಪೂರ್ಣವಾಗಿ ನಡೆಸಲು ಕ್ರಮ ವಹಿಸಲಾಗುವುದು. ಇದಕ್ಕೆ ಸರ್ವರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕನ್ನಡ ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಸಿ. ಚಂದ್ರಪ್ಪ ಮೆರವಣಿಗೆಯಲ್ಲಿ ಹೆಚ್ಚಿನ ಕಲಾತಂಡಗಳು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ವೇದಿಕೆಯಲ್ಲಿ ಪ್ರತಿ ತಾಲ್ಲೂಕಿನ ಕನಿಷ್ಠ ಒಂದು ಕಲಾತಂಡಕ್ಕೆ ಪ್ರದರ್ಶನದ ಅವಕಾಶ ಕಲ್ಪಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಇ.ಒ. ವಿಜಯ್ ಕುಮಾರ್, ಪರಿಷತ್ತು ಗೌರವಾಧ್ಯಕ್ಷೆ ಶಾಂತಾ ಗುರುಮೂರ್ತಿ, ಪ್ರಧಾನ ಕಾರ್ಯದರ್ಶಿ ರಮ್ಯಾ ಸುರೇಶ್ ಮಾತನಾಡಿದರು. ಜಾನಪದ ಅಜ್ಜಂಪುರ ಹೋಬಳಿ ಘಟಕದ ಅಧ್ಯಕ್ಷೆ ಮಧು ಮಾಲತಿ, ಶಿವನಿ ಹೋಬಳಿ ಘಟಕದ ಅಧ್ಯಕ್ಷೆ ಮಧು ನಿಂಗಪ್ಪ, ಪೂಜಾ, ಮಹಾದೇವಿ, ರೂಪ, ಭಾಗ್ಯ, ಆಶಾ, ಮಂಜುಳಾ, ಗಂಗಮ್ಮ, ಪುಟ್ಟಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-126-1512756808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.