ಮಂಗಳವಾರ, ಅಕ್ಟೋಬರ್ 4, 2022
27 °C

ಆಲ್ದೂರು: ಶಿಥಿಲಾವಸ್ಥೆಯಲ್ಲಿದ್ದಅಂಗನವಾಡಿ ಕಟ್ಟಡ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಲ್ದೂರು: ಇಲ್ಲಿನ ಸಂತೆ ಮೈದಾನ ಸಮೀಪ ಶಾಲಾ ಆವರಣದಲ್ಲಿ ಶಿಥಿಲಾವಸ್ಥೆ ಯಲ್ಲಿದ್ದ ಅಂಗನವಾಡಿ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಅಂಗಡವಾಡಿ ಕಟ್ಟಡವು ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಅದರ ಬೆನ್ನಲ್ಲೇ ಕಟ್ಟಡವನ್ನು ತೆರವು ಮಾಡಲಾಗಿದೆ.

‘ನೂತನ ಅಂಗನ ವಾಡಿ ಕಟ್ಟಡಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ₹7.50 ಲಕ್ಷ ಅನುದಾನ ನೀಡುತ್ತಿದ್ದು, ಬಾಕಿ ಅನುದಾನವನ್ನು ಗ್ರಾಮ ಪಂಚಾಯಿತಿ ವತಿಯಿಂದ ಒದಗಿಸಲು ತೀರ್ಮಾನಿಸಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಪಿಡಿಒ ಪ್ರಕಾಶ್ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.