ಆಲ್ದೂರು: ವನ್ಯಜೀವಿಗಳಿಂದ ಆಗಿರುವ ಬೆಳೆಹಾನಿ ಬಗ್ಗೆ ಮಹಜರು ಮಾಡುವಾಗ ಉಪ ವಲಯ ಅರಣ್ಯಾಧಿಕಾರಿ (ಡಿಆರ್ಎಫ್ಒ) ವೀರಭದ್ರ ನಾಯಕ್ ಅವರು ರೈತರಿಂದ ಹಣ ಕೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆದೇಶಿಸಿದ್ದಾರೆ.

ಹಾಳಾಗಿರುವ ಅಡಕೆ ಗಿಡಗಳ ಲೆಕ್ಕ ಬರೆದುಕೊಳ್ಳುವಾಗ ‘ಹಾಳಾಗಿರುವ 65 ಗಿಡಗಳ ಲೆಕ್ಕಾ ಸಿಕ್ಕಿದೆ. ಈಗಲೇ ಖರ್ಚಿಗೆ ಏನಾದರೂ ಕೊಡುವುದಾದರೆ ಬೇರೆ ಬರೆಯುತ್ತೇನೆ. ಇಲ್ಲದಿದ್ದರೆ ಇಲ್ಲ’ ಎಂದು ಹೇಳಿರುವುದು ವಿಡಿಯೊದಲ್ಲಿದೆ.

ಈ ಬಗ್ಗೆ ತನಿಖೆಗೆ ಆದೇಶಿಸಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು, ‘ಗ್ರಾಮಸ್ಥರು ನೀಡಿರುವ ದೂರುಗಳಲ್ಲಿ ಇರುವ ಅಂಶಗಳನ್ನೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಆದೇಶ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-126-2071689388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.