ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ದೂರು: ಈ ರಸ್ತೆ ತುಂಬೆಲ್ಲಾ ಹೊಂಡ

ಮಾಚಗೊಂಡನಹಳ್ಳಿಯ ಅಂಬೇಡ್ಕರ್ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಪಟ್ಟು
Last Updated 24 ಜೂನ್ 2022, 2:31 IST
ಅಕ್ಷರ ಗಾತ್ರ

ಆಲ್ದೂರು: ಸಮೀಪದ ಮಾಚಗೊಂಡನಹಳ್ಳಿಯ ಅಂಬೇಡ್ಕರ್ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರವಾಗಿದೆ. ಎರಡೂವರೆ ದಶಕಗಳಿಂದ ಈ ರಸ್ತೆಯ ಅಭಿವೃದ್ಧಿಯು ಕನಸಾಗಿಯೇ ಉಳಿದಿದೆ. ರಸ್ತೆಯನ್ನು ಅಭಿವೃದ್ಧಿಪಡಿಸಿ ಸಂಚಾರಕ್ಕೆ ಯೋಗ್ಯವಾಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರಿಯ ಪ್ರಾಥಮಿಕ ಪಾಠಶಾಲೆ, ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪಶು ಆಸ್ಪತ್ರೆಗೆ ಇದೇ ರಸ್ತೆಯ ಮೂಲಕ ಸಂಚರಿಸಬೇಕಿದ್ದು, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಭಾನುವಾರ ನಡೆಯುವ ವಾರದ ಸಂತೆ ಬರಲು ಜನರು ತೊಂದರೆ ಅನುಭವಿಸುತ್ತಿದ್ದಾರೆ.

‘250 ಮೀಟರ್‌ ಉದ್ದವಿರುವ ಈ ರಸ್ತೆಯಲ್ಲಿ 260ದೊಡ್ಡ ಗುಂಡಿಗಳಿವೆ’ ಎಂದು ಸ್ಥಳೀಯ ನಿವಾಸಿ ರಫೀಕ್ ಹೇಳಿದರು. ‘ರಸ್ತೆ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಅನುದಾನದ ಕೊರತೆ ಇದೆ. ಶಾಸಕರಿಗೆ ಮನವಿ ಮಾಡಲಾಗಿದ್ದು, ವರದಿಯನ್ನು ಅವರಿಗೆ ಕಳುಹಿಸಲಾಗಿದೆ ಎಂದು ಪಿಡಿಒ ಪರಶುರಾಮ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT