ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಫಿ ತೋಟದಲ್ಲಿ ಗಾಂಜಾ ಬೆಳೆ: ದಾಳಿ

Published 4 ಏಪ್ರಿಲ್ 2024, 14:24 IST
Last Updated 4 ಏಪ್ರಿಲ್ 2024, 14:24 IST
ಅಕ್ಷರ ಗಾತ್ರ

ಆಲ್ದೂರು: ಇಲ್ಲಿಗೆ ಸಮೀಪದ ಸತ್ತಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗುಲ್ಲನ್‌ಪೇಟೆ ಗ್ರಾಮದಲ್ಲಿ ಕಾಫಿ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆಸಿರುವ ಖಚಿತ ಮಾಹಿತಿ ಆಧಾರದಲ್ಲಿ ಗುರುವಾರ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿ ಅಬ್ದುಲ್ ಬಶೀರ್ ಎಂಬುವರ ಕಾಫಿ ತೋಟಕ್ಕೆ ದಾಳಿ ನಡೆಸಲಾಗಿದೆ. 12 ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ. ಪಿಎಸ್ಐ ಧನರಾಜ್ ಟಿ.ಎಂ ನೇತೃತ್ವದ ಪೊಲೀಸರ ತಂಡ ಗಾಂಜಾ ಗಿಡ ವಶಕ್ಕೆ ಪಡೆದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದೆ. ಕಾರ್ಯಚರಣೆಯಲ್ಲಿ ಸಿಬ್ಬಂದಿ ಚಂದ್ರಪ್ಪ ಜೆಕೆಸಿ, ಆನಂದ್, ಶಶಿಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT