ಶೃಂಗೇರಿ: ಅಖಿಲ ಭಾರತ ಕನ್ನಡ ಚುಟುಕು ಸಾಹಿತ್ಯ ಸಮ್ಮೇಳನವು ಜ. 4ರಂದು ಪಟ್ಟಣದ ಗೌರಿಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಶಿವಶಂಕರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮ್ಮೇಳನದ ಸರ್ವಾಧ್ಯಕ್ಷರಾಗಿ ಚುಟುಕು ಕವಿ ಎಚ್. ಡುಂಡಿರಾಜ್ ಆಯ್ಕೆಗೊಂಡಿದ್ದಾರೆ. ಬಳಿಗ್ಗೆ 8ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಶಾಸಕ ಟಿ.ಡಿ. ರಾಜೇಗೌಡ ಸಮ್ಮೇಳನ ಉದ್ಘಾಟಿಸುವರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭುವನೇಶ್ವರಿ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಜೆಡಿಎಸ್ನ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಉದ್ಘಾಟಿಸುವರು. ಚುಟುಕು ಕವಿ ಅರವಿಂದ ದೀಕ್ಷಿತ್ ಅಧ್ಯಕ್ಷತೆಯಲ್ಲಿ ನಡೆಯುವ ಗೋಷ್ಠಿಯನ್ನು, ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷೆ ಶೋಭಾ ಅನಂತಯ್ಯ ಉದ್ಘಾಟಿಸಲಿದ್ದಾರೆ. ಜೆ.ಪಿ.ಕೃಷ್ಣೇಗೌಡರ ಅಧ್ಯಕ್ಷತೆಯಲ್ಲಿ ಚುಟುಕು ಸಾಹಿತ್ಯ ಗೋಷ್ಠಿ ನಡೆಯಲಿದ್ದು, ನಾಗೇಶ್ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಡಾ.ಚಿಂತಾಮಣಿ ಕೊಡ್ಲಕೆರೆ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ಸುಬ್ರಹ್ಮಣ್ಯ ಮಾತನಾಡಿ, ‘ಸಮಾರಂಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಸಂಚಾಲಕ ಗಣೇಶ್ ಹೆಗ್ಡೆ ಸಮಾರೋಪ ಭಾಷಣ ಮಾಡಲಿದ್ದು, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ಈ ಸಂದರ್ಭದಲ್ಲಿ ಚಲನಚಿತ್ರ ನಿರ್ದೇಶಕ ಡಾ.ಗಿರೀಶ್ ಕಾಸರವಳ್ಳಿ ಅವರನ್ನು ಸನ್ಮಾನಿಸಲಾಗುವುದು. ಬೀದರ್ನ ಡಾ.ಎಂ.ಜಿ. ದೇಶಪಾಂಡೆ, ಬಿ.ಶಿವಶಂಕರ್ ಅವರಿಗೆ ‘ಅಖಿಲ ಭಾರತ ಕನ್ನಡ ಚುಟುಕು ಸಿರಿ ಪ್ರಶಸ್ತಿ’, ಯಜ್ಞಪುರುಷ ಭಟ್ ಸೇರಿದಂತೆ 11 ಚುಟುಕು ಕವಿಗಳಿಗೆ ‘ಚುಟುಕು ಸಿರಿ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷೆ ಪುಷ್ಪಾ ಲಕ್ಷ್ಮೀನಾರಾಯಣ, ಹೋಬಳಿ ಘಟಕದ ಅಧ್ಯಕ್ಷ ಅಂಗುರ್ಡಿ ದಿನೇಶ್, ಮಹಿಳಾ ಘಟಕದ ಅಧ್ಯಕ್ಷೆ ಸುಮಂಗಲ ಆನಂದಸ್ವಾಮಿ, ಪದಾಧಿಕಾರಿಗಳಾದ ಸುರೇಶ್, ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.