ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕನಿಗೆ ಮೂತ್ರ ನೆಕ್ಕಿಸಿದ ಆರೋಪ: ಸಿಐಡಿಯಿಂದ ಆರಂಭಗೊಂಡ ತನಿಖೆ

Last Updated 24 ಮೇ 2021, 8:41 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿದ್ದಾರೆ ಎಂದು ಆರೋಪಿಸಿ ಪರಿಶಿಷ್ಟ ಜಾತಿಯ ಕೆ.ಎಲ್.ಪುನೀತ್ ನೀಡಿರುವ ದೂರಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಶುರುವಾಗಿದೆ.

ಸಿಐಡಿ ತಂಡ ಮತ್ತು ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಅವರು ಗೋಣಿಬೀಡು ಠಾಣೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಬಾಯಿಗೆ ಮೂತ್ರ ಹುಯ್ಯಿಸಿ, ನೆಲದಲ್ಲಿದ್ದ ಮೂತ್ರ ನೆಕ್ಕಿಸಿದ್ದಾರೆ ಎಂದು ಪರಿಶಿಷ್ಟ ಸಮುದಾಯದ ಯುವಕ ನೀಡಿರುವ ದೂರಿಗೆ ಸಂಬಂಧಿಸಿದಂತೆ ಗೋಣಿಬೀಡು ಠಾಣೆ ಪಿಎಸ್‌ಐ ಕೆ.ಅರ್ಜುನ್‌ ಹೊರಕೇರಿ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿತ್ತು.

ಕಿರುಗುಂದ ಗ್ರಾಮದ ಕೆ.ಎಲ್‌.ಪುನೀತ್‌ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಪಿಎಸ್‌ಐ ಅರ್ಜುನ್‌ ಅವರನ್ನು ಅಮಾನತುಗೊಳಿಸಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT