ಕೊಪ್ಪ: ಇಲ್ಲಿನ ಆಟೊ ಚಾಲಕರು ಮತ್ತು ಮಾಲೀಕರ ಸಂಘ, ಆಳ್ವಾಸ್ ನುಡಿಸಿರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಜ. 31ರಂದು ಸಂಜೆ 5ಗಂಟೆಗೆ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ನಡೆಯಲಿದೆ ಎಂದು ಶೃಂಗೇರಿ ಕ್ಷೇತ್ರ ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಗೌರವಾಧ್ಯಕ್ಷ ಎಚ್.ಆರ್. ಜಗದೀಶ್ ತಿಳಿಸಿದರು.

ಮಂಗಳವಾರ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಸಂಘದ ಅಧ್ಯಕ್ಷ ಯು.ಪಿ. ವಿಜಯಕುಮಾರ್ ಅಧ್ಯಕ್ಷತೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಗೌರವಾನ್ವಿತ ಅತಿಥಿಯಾಗಿ ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ, ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಪ್ರಮೋದ್ ಮದ್ವರಾಜ್, ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಅಧ್ಯಕ್ಷ ವಿಶ್ವನಾಥ್ ಗದ್ದೆಮನೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲ್ತೇಶ್, ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಡಿ.ಎನ್. ಜೀವರಾಜ್, ಶಾಸಕ ಟಿ.ಡಿ. ರಾಜೇಗೌಡ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ವೇದಿಕೆ ಕಾರ್ಯಕ್ರಮದ ಬಳಿಕ, ಆಳ್ವಾಸ್ ಸಾಂಸ್ಕೃತಿಕ ವೈಭವ ದೇಶ–ವಿದೇಶಗಳ 450ಕ್ಕೂ ಹೆಚ್ಚು ಕಲಾವಿದರಿಂದ ಜರುಗಲಿದೆ. ಕಲಾತ್ಮಕ ಯೋಗ, ಶಾಸ್ತ್ರೀಯ ನೃತ್ಯ ಅಷ್ಟಲಕ್ಷ್ಮಿ, ಆಂಧ್ರದ ಜನಪದ ಬಂಜಾರ ನೃತ್ಯ, ಬಡಗುತಿಟ್ಟು ಯಕ್ಷಗಾನ ಶಂಕರಾದ ಶರೀರಿಣಿ, ಮಣಿಪುರ ಸ್ಟಿಕ್ ಡಾನ್ಸ್, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಲ್ಲಕಂಬ ಹಾಗೂ ರೋಫ್ ಕಸರತ್ತು, ಸೃಜನಾತ್ಮಕ ನೃತ್ಯ, ಕತಕ್ ನೃತ್ಯ-ವರ್ಷಧಾರೆ, ಪುರು ಲಿಯ ಸಿಂಹ ನೃತ್ಯ, ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನ, ಬೊಂಬೆ ವಿನೋದಾವಳಿ ಮುಂತಾದ ಮೈ ನವಿರೇಳಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ' ಎಂದು ತಿಳಿಸಿದರು.

ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಯು.ಪಿ. ವಿಜಯಕುಮಾರ್, ಉಪಾಧ್ಯಕ್ಷರಾದ ಸುಧಾಕರ, ಗಣೇಶ್, ಪ್ರಧಾನ ಕಾರ್ಯದರ್ಶಿ ವಿಕ್ರಂ, ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಇದ್ದರು.