ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಒತ್ತಾಯ
Published 15 ಸೆಪ್ಟೆಂಬರ್ 2023, 14:17 IST
Last Updated 15 ಸೆಪ್ಟೆಂಬರ್ 2023, 14:17 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ ಮಾಡುವ ಆರನೇ ಗ್ಯಾರೆಂಟಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಆಜಾದ್ ಪಾರ್ಕ್ ವೃತ್ತದಲ್ಲಿ ಧರಣಿ ನಡೆಸಿದ ಕಾರ್ಯಕರ್ತೆಯರು, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಖಂಡಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ ಮಾಡುವುದಾಗಿ ಚುನಾವಣಾ ಪೂರ್ವದಲ್ಲಿ ಪ್ರೀಯಾಂಕ ಗಾಂಧಿ ಅವರು ಆರನೇ ಗ್ಯಾರೆಂಟಿ ನೀಡಿದ್ದರು. ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ, ಸಹಾಯಕಿಯರಿಗೆ ₹10 ಸಾವಿರ ಹಾಗೂ ನಿವೃತ್ತರಿಗೆ ₹3 ಲಕ್ಷ ಇಡಿಗಂಟು ನೀಡುವ ಭರವಸೆಯನ್ನು ನೀಡಿದ್ದರು. ಇದನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆತರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಎಲ್ಲಾ ನಿವೃತ್ತರಿಗೂ ಅನ್ವಯವಾಗುವಂತೆ ಜಾರಿಗೊಳಿಸಲು ಆಡಳಿತಾತ್ಮಕವಾಗಿ ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಶಿಶುಪಾಲನಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸಮಗ್ರ ಶಿಕ್ಷಣ ಕರ್ನಾಟಕದಿಂದ ನಾಲ್ಕರಿಂದ ಐದನೇ ವರ್ಷದ ವಯೋಮಾನದ ಮಕ್ಕಳಿಗಾಗಿ ಶಾಲಾಪೂರ್ವ ತರಗತಿಗಳನ್ನು ಪ್ರಾರಂಭಿಸಲು ಆದೇಶಿಸಿದೆ. ಹಾಗೇ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. ಇದರಿಂದ ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಸ್ಥಿತಿ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಗ್ರೇಟ್ ಫರ್ನಾಂಡೀಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪ ಬಸವರಾಜ್, ಪೂರ್ಣಿಮಾ, ಯಶೋಧ, ಸವಿತಾ, ರಾಜೇಶ್ವರಿ, ಅನುಸೂಯ, ಚಂದ್ರಕಲಾ, ವಸಂತ ಧರ್ಮೇಗೌಡ, ಶೈಲಾ ಬಸವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT