ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ನ್ಯಾಯಾಲಯದ ಹಾಲಿ ಕಟ್ಟಡ ಆಧುನೀಕರಣಗೊಳಿಸಿ: ಮನವಿ

Published 31 ಮೇ 2024, 16:19 IST
Last Updated 31 ಮೇ 2024, 16:19 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೊಸ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಿ, ಹಾಲಿ ಕಟ್ಟಡವನ್ನೇ ಆಧುನೀಕರಣಗೊಳಿಸಿ ಸಾರ್ವಜನಿಕರಿಗೆ ಅನುಕೂಲಮಾಡಿಕೊಡಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಹಾಗೂ ಕನ್ನಡ ಸೇವೆ ಮುಖಂಡರು ಜಿಲ್ಲಾಧಿಕಾರಿ ಮೀನಾನಾಗರಾಜ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಬಿಎಸ್‍ಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಹೊಸದಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯದ ಕಟ್ಟಡ ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿದೆ. ಇದರಿಂದ ಕಳಸ, ಶೃಂಗೇರಿ ಮೊದಲಾದ ದೂರದ ಊರುಗಳಿಂದ ಬರುವ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗಲಿದ್ದು ದುಬಾರಿ ಹಣಕೊಟ್ಟು ಹೋಗಬೇಕಾದ ಅನಿವಾರ್ಯತೆ ಸೃಷ್ಠಿಯಾಗಲಿದೆ. ಪ್ರಸ್ತುತ ನ್ಯಾಯಾಲಯ ಕಟ್ಟಡ ನಗರದ ಹೃದಯಭಾಗದಲ್ಲಿದೆ ವಕೀಲರು ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಿದೆ. ಹಾಗಾಗಿ ಹಳೆಯ ಕಟ್ಟಡವನ್ನೇ ನವೀಕರಣಗೊಳಿಸಬೇಕು ಎಂದು ಕೋರಿದರು.

ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ವಸತಿ ಶಾಲೆ ಅಥವಾ ಕಾಲೇಜುಗಳಿಗೆ ಬಿಟ್ಟುಕೊಡಬೇಕು. ಹಾಲಿ ನ್ಯಾಯಾಲಯದ ಸಂಕೀರ್ಣವನ್ನು ಆಧುನೀಕರಣಗೊಳಿಸಿ ಕಲಾಪಗಳನ್ನು ನಡೆಯುವಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಬಿಎಸ್‍ಪಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಬಿ.ಸುಧಾ, ಕನ್ನಡಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ.ರಾಜೇಗೌಡ, ಮುಖಂಡರಾದ ಗಂಗಾಧರ್, ಹೊನ್ನಪ್ಪ, ವಸಂತ್, ಜಯಪ್ರಕಾಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT