ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪ ತಾಲ್ಲೂಕು ಆಡಳಿತ: ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ

Last Updated 19 ಸೆಪ್ಟೆಂಬರ್ 2019, 10:11 IST
ಅಕ್ಷರ ಗಾತ್ರ

ಕೊಪ್ಪ: ಭೂಮಿ ಯೋಜನೆ ಅಡಿಯಲ್ಲಿ ಆಗಸ್ಟ್‌ನಲ್ಲಿ ಸ್ವೀಕರಿಸಲಾದ 225 ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ಶೀಘ್ರ ವಿಲೇವಾರಿ ಮಾಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ತಾಲ್ಲೂಕು ಆಡಳಿತದ ಕಾರ್ಯ ಕ್ಷಮತೆಯನ್ನು ಶ್ಲಾಘಿಸಿರುವ ಭೂಮಾಪನ ಇಲಾಖೆ ಆಯುಕ್ತ ಮನೀಶ್ ಮೌದ್ಗಿಲ್ ಅವರು ತಹಶೀಲ್ದಾರ್ ಪಿ.ಎಸ್.ಎರ್ರಿಸ್ವಾಮಿ ಅವರಿಗೆ ಅಭಿನಂದನಾ ಪತ್ರ ನೀಡಿದ್ದಾರೆ.

ಸಕಾಲ ಸೇವೆಗಳ ಅಧಿನಿಯಮದಡಿ ಜೂನ್‌ನಲ್ಲಿ ಸಹ 423 ಅರ್ಜಿಗಳನ್ನು ವಿಲೇವಾರಿ ಮಾಡಿ ಜನರಿಗೆ ಸೇವೆ ಒದಗಿಸಿದ್ದಕ್ಕೆ ಜಿಲ್ಲಾಧಿಕಾರಿ ಪ್ರಶಂಸನಾ ಪತ್ರ ನೀಡಿದ್ದರು. ನಂತರ ಜುಲೈನಲ್ಲಿ 690 ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಿ ಸೇವೆ ಒದಗಿಸಿದ್ದರು. ಜನಪರವಾಗಿ ಕೆಲಸ ಮಾಡುತ್ತಿರುವುದನ್ನು ಮತ್ತಷ್ಟು ಉತ್ಸುಕತೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿದ್ದರು.

ಕಳೆದ ಬೇಸಿಗೆ ವೇಳೆಯಲ್ಲಿ ತಾಲ್ಲೂಕು ಕಚೇರಿಯಲ್ಲಿ ಪಹಣಿ ಪಡೆಯಲು ಜನರು ಬಿಸಿಲಿನಲ್ಲಿ ಸಾಲುಗಟ್ಟಿ ನಿಂತಿರುವುದನ್ನು ‘ಪ್ರಜಾವಾಣಿ’ ವರದಿ ಪ್ರಕಟಸಿತ್ತು. ಇದಕ್ಕೆ ತಕ್ಷಣ ಸ್ಪಂದಿಸಿದ ಎರ್ರಿಸ್ವಾಮಿ ಅವರು ಶೀಟ್ ಮಾಡನ್ನು ನಿರ್ಮಿಸಿ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ನಂತರ ತಾಲ್ಲೂಕು ಕಚೇರಿಯಲ್ಲಿ ಜನರಿಗೆ ಕುಡಿಯುವ ನೀರನ್ನು ಒದಗಿಸಿದ್ದರು. ಸಕಾಲ ಸೇವೆಯೊಂದಿಗೆ ಇದೀಗ ಭೂಮಿ ಯೋಜನೆಯಡಿಯಲ್ಲಿ ಕಾಲಮಿತಿಯಲ್ಲಿ ಸೇವೆ ಒದಗಿಸಿರುವುದಕ್ಕೆ ತಾಲ್ಲೂಕಿನ ನಾಗರಿಕರು ತಹಶೀಲ್ದಾರ್ ಎರ್ರಿಸ್ವಾಮಿ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT