ಮಂಗಳವಾರ, ಜನವರಿ 26, 2021
16 °C
ವಿಜಯೋತ್ಸವದ ಬದಲು ಶಾಲಾ ಆವರಣ ಸ್ವಚ್ಛತೆ

ಗ್ರಾಮ ಪಂಚಾಯಿತಿ ಸದಸ್ಯನ ಕಾರ್ಯಕ್ಕೆ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶೃಂಗೇರಿ: ತಾಲ್ಲೂಕಿನ ಉಳುವೆಬೈಲು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಮತ್ತು ಸಮೀಪದ ಉಳುವೆ ರಂಗ ಮಂದಿರವನ್ನು ಅಡ್ಡಗದ್ದೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದ ಹಂಚಲಿ ರಾಘವೇಂದ್ರ ಅವರು ತಮ್ಮ ಗೆಳೆಯರ ಜೊತೆಗೂಡಿ ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ.

ಕಾವಡಿ ಗ್ರಾಮದ ವಾರ್ಡ್‌ನಿಂದ ಗೆಲುವು ಸಾಧಿಸಿದ ರಾಘವೇಂದ್ರ ಅವರು ಯಾವುದೇ ಸಂಭ್ರಮಾಚರಣೆ ಮಾಡದೆ ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ. 

ರಾಘವೇಂದ್ರ ಮಾತನಾಡಿ, ‘ಗ್ರಾಮೀಣ ಅಭಿವೃದ್ಧಿಯಿಂದ ರಾಷ್ಟ್ರದ ಅಭಿವೃದ್ಧಿ ಎಂಬ ಪರಿಕಲ್ಪನೆಯಿಂದ ಕಾರ್ಯನಿರ್ವಹಿಸುತ್ತೇನೆ. ಉಳುವೆಬೈಲು ಶಾಲೆ ಹತ್ತು ವರ್ಷಗಳಿಂದ ಮಕ್ಕಳ ಕೊರತೆಯಿಂದ ಮುಚ್ಚಲಾಗಿದೆ. ಹರಿಹರಪುರದ ಮಠದ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಓದಿದ ಈ ಶಾಲೆಗೆ 70 ವರ್ಷಗಳ ಇತಿಹಾಸವಿದೆ. ಸರ್ಕಾರ ಈ ಶಾಲೆಯಲ್ಲಿ ಆಂಗ್ಲ ಹಾಗೂ ಕನ್ನಡ ಮಾಧ್ಯಮ ತರಗತಿ ತೆರೆದರೆ ಮಕ್ಕಳನ್ನು ಶಾಲೆಗೆ ಸೇರಿಸುವ ಜವಾಬ್ದಾರಿ ನಿರ್ವಹಿ ಸುತ್ತೇನೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು