ಕಡೂರು: ‘ಪ್ರತಿ ಬಾರಿ ಹಿಟ್ ಅಂಡ್ ರನ್ ಮಾಡುತ್ತಿದ್ದ ಅಶ್ವತ್ಥ ನಾರಾಯಣ ಅವರು ಮೊದಲ ಬಾರಿಗೆ ಒಳ್ಳೆಯ ಕಾರ್ಯ ಮಾಡಿದ್ದಾರೆ’ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಕಡೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂದನ ಇಲಾಖೆಯ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಸಚಿವ ಜಾರ್ಜ್ ಅವರ ಪಾತ್ರವೂ ಇದೆ ಎಂದು ಅಶ್ವತ್ಥನಾರಾಯಣ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿರುವುದು ಒಳ್ಳೆಯ ಕಾರ್ಯ. ಯಾವಾಗಲೂ ಬರೀ ಹೇಳಿಕೆ ನೀಡಿ ಅದರಿಂದ ದೂರ ಹೋಗುತ್ತಿದ್ದ ಮಾಜಿ ಉಪಮುಖ್ಯಮಂತ್ರಿ ಈಗ ಕ್ರಮ ಬದ್ಧವಾದ ಕಾರ್ಯ ಮಾಡಿದ್ದಾರೆ. ಲೋಕಾಯುಕ್ತ ತನಿಖೆಗೆ ಪೂರ್ಣ ಸಹಕಾರ ನೀಡುತ್ತೇನೆ. ತನಿಖೆ ನಡೆಯಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಹಗರಣದ ವಿಚಾರದಲ್ಲಿ ಅದಕ್ಕೊಂದು ತಾರ್ಕಿಕ ಅಂತ್ಯ ಕಾಣಬೇಕು ಎನ್ನುವುದು ನಮ್ಮ ಆಶಯವೂ ಹೌದು’ ಎಂದರು.

ಸಿಇಟಿ ಪರೀಕ್ಷೆ ಸಮಯ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ದೊಡ್ಡ ತಪ್ಪು. ಯಾವುದೇ ಧರ್ಮವಾಗಲಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕಾರ್ಯಬಾರದು. ಆ ಘಟನೆಯನ್ನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಪ್ರಸ್ತಾವನೆಯಿದೆ. ಅದು ಕಡೂರಿಗೆ ದೊರೆಯಬೇಕೆಂಬುದು ಶಾಸಕ ಆನಂದ್ ಒತ್ತಾಸೆಗೆ ನಮ್ಮ ಸಹಮತವೂ ಇದೆ. ಜಿಲ್ಲೆಯ ಪ್ರಮುಖ ತಾಲ್ಲೂಕು ಕಡೂರು. ಇಲ್ಲಿನ ಅಭಿವೃದ್ಧಿಗೆ ಸಹಕಾರ ಸದಾ ಇರುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.