ಮಂಗಳವಾರ, ಸೆಪ್ಟೆಂಬರ್ 21, 2021
21 °C

ಪೊಲೀಸರು ವಶಪಡಿಸಿಕೊಂಡಿರುವ ವಾಹನಗಳ ಬಹಿರಂಗ ಹರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ನಗರದ ಪೊಲೀಸ್ ಠಾಣೆಯ ಅಧಿಕಾರಿಗಳು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ವಾರಸುದಾರರು ಪತ್ತೆಯಾಗದಿರುವ ವಾಹನಗಳನ್ನು ಜುಲೈ 30 ರಂದು ಬೆಳಿಗ್ಗೆ 10 ಗಂಟೆಗೆ ನಗರ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗವಾಗಿ ಹರಾಜು ಮಾಡಲಾಗುವುದು ಎಂದು ಠಾಣೆಯ ಇನ್ ಸ್ಪೆಕ್ಟರ್ ಜೆ.ಎನ್.ಆನಂದಕುಮಾರ್ ತಿಳಿಸಿದ್ದಾರೆ.

ವಾರಸುದಾರರು ಇಲ್ಲದೆ ನಗರಠಾಣೆಯ ಆವರಣದಲ್ಲಿರುವ 39 ದ್ವಿಚಕ್ರವಾಹನ, 1 ಲಗ್ಗೇಜ್ ಆಟೋ, 3 ಪ್ಯಾಸೆಂಕರ್ ಆಟೋ ವಾಹನಗಳನ್ನು ನಗರದ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಧೀಶರ ಅನುಮತಿಯನ್ನು ಪಡೆದು ಕಾನೂನು ಪ್ರಕ್ರಿಯೆಗಳನ್ನು ಪಾಲಿಸಿಕೊಂಡು ಸಾರ್ವಜನಿಕವಾಗಿ ಹರಾಜು ನಡೆಸಲಾಗುತ್ತದೆ.

ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು ಗುರುತಿನ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಒಂದು ಸಾವಿರ ರೂ ಠೇವಣಿ ಮಾಡಿ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ಹರಾಜಿನಲ್ಲಿ ಹೆಚ್ಚಿನ ಮೊತ್ತಕ್ಕೆ ಕೂಗಿದವರು ಸ್ಥಳದಲ್ಲೇ ಮೊತ್ತದ ಹಣವನ್ನು ಪಾವತಿಸಿ ವಾಹನವನ್ನು ವಶಕ್ಕೆ ಪಡೆದುಕೊಳ್ಳಬೇಕು. ಉಪವಿಭಾಗದ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಹರಾಜು ಪ್ರಕ್ರಿಯೆಯ ಉಸ್ತುವಾರಿ ಅಧಿಕಾರಿಯಾಗಿದ್ದು, ಅವರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.