ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವಸ್ತುಗಳ ದುಷ್ಪರಿಣಾಮ ಜಾಗೃತಿ

ವಶಪಡಿಸಿಕೊಂಡಿದ್ದ 1.9 ಕ್ವಿಂಟಲ್‌ ಗಾಂಜಾ ನಾಶ
Last Updated 28 ಜೂನ್ 2022, 5:07 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಾಗೃತಿ ವಾಹಿನಿ ಮೂಲಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ ತಿಳಿಸಿದ್ದಾರೆ.

ಜಾಗೃತಿ ವಾಹಿನಿ 48 ಶಾಲೆ, ಕಾಲೇಜು, 22 ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿದೆ. ತಂಡದವರು 3258 ವಿದ್ಯಾರ್ಥಿಗಳು, 868 ಜನರನ್ನು ಭೇಟಿ ಮಾಡಿ ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ತಿಳಿಸಿದ್ದಾರೆ.

ಜೂನ್‌ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಆಚರಿಲಾಯಿತು. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 1.9 ಕ್ವಿಂಟಲ್‌ ಗಾಂಜಾವನ್ನು ಹಾಸನದ ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 74 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಘಿದೆ. ಮಾದಕ ವಸ್ತುಗಳ ಹಾವಳಿ ತಡೆಯಲು ಇಲಾಖೆ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾರ್ವಜನಿಕರು ಇಲಾಖೆಯ ಜೊತೆ ಕೈಜೋಡಿಸಬೇಕು. ಮಾದಕ ವಸ್ತುಗಳ ಬಗ್ಗೆ ಮಾಹಿತಿ ಇದ್ದರೆ 112 ಸಹಾಯವಾಣಿ ಅಥವಾ ಪೊಲೀಸ್‌ ಕಂಟ್ರೋಲ್‌ ರೂಂ ದೂ: 9480805100 ಕರೆ ಮಾಡಿ ತಿಳಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT