ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ 1650 ಕಾಯಿಲೆಗೆ ಚಿಕಿತ್ಸೆ: ಮಂಜಳಾ

Published 10 ಮೇ 2024, 13:22 IST
Last Updated 10 ಮೇ 2024, 13:22 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಮೂಲಕ 1,650 ಕಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆಯ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ಹೇಳಿದರು.

ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ರೋಟರಿ ಕ್ಲಬ್ ಹಾಗೂ ಹಿರಿಯ ನಾಗರಿಕ ವೇದಿಕೆ ಆಯೋಜಿಸಿದ್ದ ಮಾಹಿತಿ ಕಾರ್ಯಕ್ರಮದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಬಗ್ಗೆ ಅವರು ಮಾಹಿತಿ ನೀಡಿದರು.

ಹಿಂದೆ ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದಿತ್ತು. ನಂತರ ರಾಜ್ಯ ಸರ್ಕಾರವೂ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತಂದಿತು. ರಾಜ್ಯ ಸರ್ಕಾರ ಎರಡೂ ಯೋಜನೆಗಳನ್ನು ಒಟ್ಟು ಮಾಡಿ ಆಯುಷ್ಮಾನ್ ಭಾರತ್ಆರೋಗ್ಯ ಕರ್ನಾಟಕ ಎಂಬ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯ ಪ್ರಕಾರ ಬಿಪಿಎಲ್ ಕಾರ್ಡ್‌ದಾರರಿಗೆ ₹ 5 ಲಕ್ಷದವರೆಗೆ ಚಿಕಿತ್ಸೆ ಪಡೆಯಲು ಅವಕಾಶವಿದೆ. ಎ.ಪಿ.ಎಲ್ ಕಾರ್ಡ್‌ದಾರರಿಗೆ ₹ 1.50 ಲಕ್ಷದ ವರೆಗಿನ ಚಿಕಿತ್ಸೆಯನ್ನು ಪಡೆಯಲು ಅವಕಾಶ ಇದೆ ಎಂದರು.

ಪ್ರಥಮ ಹಂತದ ಕಾಯಿಲೆಗಳಿಗೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ದ್ವಿತೀಯ ಹಂತದ ಕಾಯಿಲೆಗಳಿಗೆ ತಾಲ್ಲೂಕು ಅಥವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ತೃತೀಯ ಹಂತದ ಕಾಯಿಲೆಗಳಾದ ಕ್ಯಾನ್ಸರ್, ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮುಂತಾದವುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಆದರೆ, ತಾಲ್ಲೂಕು ಅಥವಾ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ಪತ್ರ ತರುವುದು ಕಡ್ಡಾಯವಾಗಿದೆ ಎಂದರು.

ಸ್ಟಾರ್ ಹೆಲ್ತ್ಇನ್ಸೂರೆನ್ಸ್ ಶಿವಮೊಗ್ಗ ಶಾಖೆಯ ಹಿರಿಯ ಮ್ಯಾನೇಜರ್ ಉಮೇಶ್ ನಾಯಕ್ ಮಾಹಿತಿ ನೀಡಿದರು.

ತಾಲ್ಲೂಕು ಹಿರಿಯ ನಾಗರಿಕ ಸಮಿತಿ ಅಧ್ಯಕ್ಷ ಎಚ್.ಆರ್.ದಿನೇಶ್ ಅಧ್ಯಕ್ಷತೆ ವಹಿಸಿದ್ದರು.

ರೋಟರಿ ಕ್ಲಬ್ ಅಧ್ಯಕ್ಷ ಎನ್.ಕೆ.ಕಿರಣ್, ರೋಟರಿ ಕ್ಲಬ್ ಕಾರ್ಯದರ್ಶಿ ಪಿ.ಎಸ್.ವಿದ್ಯಾನಂದಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT