ಕೆರೆಮನೆ (ಎನ್.ಆರ್.ಪುರ): ತಾಲ್ಲೂಕಿನ ಕಾನೂರು ಗ್ರಾಮದ ಕೆರೆಮನೆಯ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವದ ಅಂಗವಾಗಿ ಜ.8ರಂದು ಬೆಳಿಗ್ಗೆ 8ರಿಂದ ಗಣಪತಿ ಪೂಜೆ, ಗಣಪತಿ ಹೋಮ, ಕಲಾ ಹೋಮ, ಸಾಮೂಹಿಕ ಸತ್ಯನಾರಾಯಣ ವ್ರತ, ಮಾಳಿಗ ಪುರತಮ್ಮ ದೇವಿಗೆ ಸಹಸ್ರನಾಮ ಕಂಕುಮಾರ್ಚನೆ, ಸಪ್ತಸತಿ ಪಾರಾಯಣ, ನಾಗದೇವರಿಗೆ ಪವಮಾನ ಅಭಿಷೇಕ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ.

ಬೆಳಿಗ್ಗೆ 11ಕ್ಕೆ ಹರಿಹರಪುರಮಠದ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರಿಂದ ಆಶೀವರ್ಚನ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6ಕ್ಕೆ ಕಾನೂರು ವಿನಾಯಕ ಚೆಂಡೆ ಬಳಗದಿಂದ ಚೆಂಡೆ ಸೇವೆ, ಕಾನೂರು ಸಿದ್ಧಿವಿನಾಯಕ ದೇವಸ್ಥಾನದಿಂದ ಮೆರವಣಿಗೆಯೊಂದಿಗೆ ಅಯ್ಯಪ್ಪಸ್ವಾಮಿ ದೇವಸ್ಥಾನವರೆಗೆ ಜ್ಯೋತಿ ತರುವ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, 10.30ರಿಂದ ದೀಪಾರಾಧನೆ, 2ಗಂಟೆಗೆ ತಣ್ಣಿರಪ್ಪ, ದೇವಿ ಮೆರವಣಿಗೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಕೆರೆಮನೆ ತಿಮ್ಮಪ್ಪಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.