ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾಬುಡನ್‌ ಗಿರಿ | ಆಕ್ಷೇಪಣೆಗೆ ಆಹ್ವಾನ, ವಿಚಾರಣೆ ನಡೆಸಿ ನಿರ್ಧಾರ: ಮಾಧುಸ್ವಾಮಿ

Last Updated 8 ಅಕ್ಟೋಬರ್ 2021, 15:37 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಶ್ರೀಗುರುದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರವು ಸಂಪುಟ ಉಪಸಮಿತಿ ನೇಮಿಸಿದ್ದು, ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಸಲಾಗಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಸಮಿತಿಯ ಅಧ್ಯಕ್ಷ ಇದ್ದೇನೆ. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌. ಅಂಗಾರ ಸಮಿತಿಯಲ್ಲಿ ಇದ್ದಾರೆ’ ಎಂದರು.

‘ಸ್ಪಷ್ಟ ನಿರ್ಧಾರ ಕೈಗೊಳ್ಳುವಂತೆ ‌ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕೆಯಲ್ಲಿ ಪ್ರಕಟಣೆ ನೀಡುತ್ತೇವೆ. ಸಂಬಂಧಪಟ್ಟವರು ಸಮಿತಿ ಮುಂದೆ ದಾಖಲೆಸಹಿತ ಅಭಿಪ್ರಾಯ ಮಂಡಿಸಲು ಅವಕಾಶ ನೀಡುತ್ತೇವೆ. ಧಾರ್ಮಿಕದತ್ತಿ ಇಲಾಖೆ ಅಥವಾ ಕಂದಾಯ ಇಲಾಖೆಗೆ ಅರ್ಜಿ ಆಹ್ವಾನಿಸಿ, ವಿಚಾರಣೆ ಮಾಡುತ್ತೇವೆ. ಅರ್ಜಿಗಳು ಜಾಸ್ತಿ ಇದ್ದರೆ ಚಿಕ್ಕಮಗಳೂರಿಗೆ ಬಂದು ವಿಚಾರಣೆ ಮಾಡುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

‘ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕಾದ ಜವಾಬ್ದಾರಿ ಸರ್ಕಾರದ ಮೇಲಿದೆ. ತ್ವರಿತವಾಗಿ ನಿರ್ಧಾರ ಕೈಗೊಳ್ಳಬೇಕು ಎಂಬ ಹುಮ್ಮಸ್ಸು ನಮಗಿದೆ, ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT