ಗಿರಿಶ್ರೇಣಿ ಮಾರ್ಗ; ಪ್ರವಾಸಿ ವಾಹನ ಸಂಚಾರಕ್ಕೆ ನಿರ್ಬಂಧ

7

ಗಿರಿಶ್ರೇಣಿ ಮಾರ್ಗ; ಪ್ರವಾಸಿ ವಾಹನ ಸಂಚಾರಕ್ಕೆ ನಿರ್ಬಂಧ

Published:
Updated:

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಗಿರಿಶ್ರೇಣಿ ಮಾರ್ಗದಲ್ಲಿ ಗುಡ್ಡದಮಣ್ಣು ಕುಸಿಯುವ ಸಾಧ್ಯತೆ ಇರುವುದರಿಂದ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ರಸ್ತೆಯಲ್ಲಿ ಪ್ರವಾಸಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಈ ರಸ್ತೆಯಲ್ಲಿ ಪ್ರವಾಸಿಗರ ವಾಹನಗಳಿಗೆ ಬುಧವಾರದಿಂದಲೇ ನಿರ್ಬಂಧ ವಿಧಿಸಲಾಗಿದೆ. ಕೈಮರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಬ್ಯಾರಿಕೇಡ್‌ ಹಾಕಿ ಪ್ರವಾಸಿ ವಾಹನಗಳು ಸಂಚರಿಸದಂತೆ ನಿಗಾ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡ್ಡಗಾಡಿನ ಈ ಪ್ರದೇಶದಲ್ಲಿ ಮಳೆಯಿಂದಾಗಿ ಕೆಲವು ಕಡೆ ಕೊರಕಲಾಗಿ, ಮಣ್ಣು ಸಡಿಲವಾಗಿದೆ. ಗಾಳಿಮಳೆ ರಭಸಕ್ಕೆ ಗಿಡಮರಗಳು ಉರುಳುವ, ಮಣ್ಣು ಕುಸಿಯುವ ಸಾಧ್ಯತೆ ಇರುತ್ತದೆ. ಲೋಕೋಪಯೋಗಿ ಇಲಾಖೆಯವರು ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸುವಂತೆ ಕೋರಿದ್ದರು. ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !